ಹೃದಯ ವೈಶಾಲ್ಯತೆ ಇಲ್ಲದವರು ಟಿಪ್ಪು ಜಯಂತಿ ವಿರೋಧಿಸುತ್ತಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

Ramesh-Kumar-01

ಕೋಲಾರ,ನ.10-ಹೃದಯ ವೈಶಾಲ್ಯತೆ ಇಲ್ಲದವರು ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಕುಮಾರ್ ಹೇಳಿದರು. ಟಿಪ್ಪು ಜಯಂತಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ದಾರ್ಶನಿಕರ ಜಯಂತಿಯನ್ನು ಸರ್ಕಾರವೇ ಮಾಡುತ್ತಿದೆ. ಅದೇ ರೀತಿ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದೇವೆ. ಇದರ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು. ಯಾರೂ ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಬಾರದು ಎಂದರು. ಮಹಾತ್ಮ ಗಾಂಧೀಜಿಯವರನ್ನು ಕೊಂದಿದ್ದು ಸಹ ಹೃದಯ ವೈಶಾಲ್ಯತೆ ಇಲ್ಲದವರೇ ಎಂದು ಹೇಳಿದರು.

ಸಂಸದ ಪ್ರತಾಪ್ ಸಿಂಹ ಮತ್ತಿತರರು ಟಿಪ್ಪು ಜಯಂತಿ ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರುಗಳಿಗೆ ಹಿಟ್ಲರ್ ಮತ್ತು ನೆಹರೂ ಅವರ ಬಗ್ಗೆ ವ್ಯತ್ಯಾಸವೇ ತಿಳಿಯದವರು ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ಖಾಸಗಿ ಆಸ್ಪತ್ರೆಗಳ ವಿಧೇಯಕವು ನ.14ರಂದು ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯರ ಬಗ್ಗೆ ಎಲ್ಲ ರೀತಿಯ ಕಾನೂನುಗಳಿವೆ. ಆದರೆ ಖಾಸಗಿ ಆಸ್ಪತ್ರೆ ಮತ್ತು ವೈದ್ಯರ ಬಗ್ಗೆ ಯಾವುದೇ ಕಾನೂನು ಕಟ್ಟಳೆಗಳಿಲ್ಲ. ಇದರಿಂದ ಬಡರೋಗಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ವಿಧೇಯಕವನ್ನು ಮಂಡಿಸಲು ತೀರ್ಮಾನಿಸಿರುವುದಾಗಿ ಹೇಳಿದರು. ನಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಯಾರಿಗೂ ಹೆದರುವುದಿಲ್ಲ. ನಾವು ಬಡಜನರ ಪರವಾಗಿದ್ದೇವೆ ಎಂದರು. ನಂತರ ಹೈದರಾಲಿ ದರ್ಗಾಕ್ಕೆ ತೆರಳಿ ಅಲ್ಲಿ ಹೈದರಾಲಿ ಕುಟುಂಬದ 12 ಗೋರಿಗಳಿಗೂ ಪುಷ್ಪ ನಮನ ಸಲ್ಲಿಸಿದರು.

Facebook Comments

Sri Raghav

Admin