ಜೆಡಿಎಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ಒಕ್ಕಲಿಗರ ಸಂಘದ ನಿರ್ದೇಶಕ ಅ.ದೇವೇಗೌಡ ರಾಜೀನಾಮೆ

ಈ ಸುದ್ದಿಯನ್ನು ಶೇರ್ ಮಾಡಿ

Okkaliga

ಬೆಂಗಳೂರು, ನ.11- ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅ.ದೇವೇಗೌಡ ಜೆಡಿಎಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂಬರುವ ಪದವೀಧರ ಕ್ಷೇತ್ರ ಚುನಾವಣೆಗೆ ಜೆಡಿಎಸ್‍ನಿಂದ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಮುನ್ನ ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಕಳೆದ 2008ರಿಂದ ಇದುವರೆಗೂ ಜೆಡಿಎಸ್‍ನ ಸಕ್ರಿಯ ಸದಸ್ಯರಾಗಿ, ಪ್ರಾಮಾಣಿಕವಾಗಿ ನನ್ನ ಪಾಲಿನ ಕರ್ತವ್ಯವನ್ನು ನಿಭಾಯಿಸಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದ ಕಳೆದ ಚುನಾವಣೆಯಲ್ಲಿ ನನ್ನನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನಾಗಿ ಕಣಕಿಳಿಸಿದ್ದು, ಕೇವಲ 194 ಮತಗಳಿಂದ ಪರಾಭವಗೊಂಡೆ, ಆದರೂ ಪಕ್ಷದ ಘನತೆ, ಗೌರವಗಳಿಗೆ ದಕ್ಕೆ ಬರದಂತೆ ನಡೆದುಕೊಂಡಿದ್ದು, ನನ್ನ ರಾಜೀನಾಮೆಯನ್ನು ಅಂಗೀಕರಿಸಿ ಆಶೀರ್ವದಿಸಬೇಕೆಂದು ಪತ್ರದಲ್ಲಿ ಕೋರಿದ್ದಾರೆ.

Facebook Comments

Sri Raghav

Admin