ಮಂಗಳೂರಲ್ಲಿ ನವಕರ್ನಾಟಕ ಬಿಜೆಪಿ ಪರಿವರ್ತನಾ ರ‍್ಯಾಲಿ, 3 ಕಡೆ ಸಮಾವೇಶ

ಈ ಸುದ್ದಿಯನ್ನು ಶೇರ್ ಮಾಡಿ

Rally--02

ಬೆಂಗಳೂರು, ನ.11-ನವಕರ್ನಾಟಕ ಬಿಜೆಪಿ ಪರಿವರ್ತನಾ ರ್ಯಾಲಿ ಇಂದು ಮಂಗಳೂರಿನ ಮೂರು ಕಡೆ ಸಮಾವೇಶ ನಡೆಸಲಿದೆ. ಮಂಗಳೂರು ನಗರ, ಬಂಟ್ವಾಳ ಹಾಗೂ ಮೂಲ್ಕಿ-ಮೂಡಬಿದರೆಯಲ್ಲಿ ಪರಿವರ್ತನಾ ರ್ಯಾಲಿ ಸಂಚರಿಸಲಿದೆ. ನಿನ್ನೆ ದಕ್ಷಿಣ ಕನ್ನಡ ಜಲ್ಲೆಯ ಸುಳ್ಯ, ಪುತ್ತೂರಿನಲ್ಲಿ ಸಮಾವೇಶ ನಡೆಸಲಾಗಿತ್ತು. ಇಂದು ಅರಣ್ಯ ಸಚಿವ ರಮಾನಾಥ ರೈ ಪ್ರತಿನಿಧಿಸುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಪರಿವರ್ತನಾ ರ್ಯಾಲಿ ನಡೆಯುತ್ತಿರುವುದರಿಂದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಈ ಹಿಂದೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದರಿಂದ ಬಂಟ್ವಾಳದಲ್ಲಿ ಸರಿ ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ 144 ಸೆಕ್ಷನ್ ಜಾರಿ ಮಾಡಲಾಗಿತ್ತು.

ನಿನ್ನೆಯಷ್ಟೇ ಟಿಪ್ಪು ಜಯಂತಿ ಆಚರಣೆ ನಡೆಸಿದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಿಗಿಭದ್ರತೆ ಕೈಗೊಳ್ಳಲಾಗಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ರೆಡ್ಡಿ ಭದ್ರತೆಯ ಉಸ್ತುವಾರಿ ವಹಿಸಿದ್ದಾರೆ. ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ, ಪಿಡಿಎಫ್ ಮತ್ತು ಎಸ್‍ಡಿಪಿಐ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಯಿಂದ ಪರಿವರ್ತನಾ ರಥ ಯಾತ್ರೆ ಸಂಚರಿಸುವ ಬಹುತೇಕ ಕಡೆ ಕೋಮು ಗಲಭೆ ಉಂಟಾಗದಂತೆ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಸಂಸದರಾದ ಶೋಭಾ ಕರಂದ್ಲಾಜೆ, ನಳೀನ್‍ಕುಮಾರ್ ಕಟೀಲ್, ಮುಖಂಡರಾದ ಕೃಷ್ಣ ಪಾಲೇಮಾರ್, ಸುನೀಲ್‍ಕುಮಾರ್, ಅಂಗಾರ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

Facebook Comments

Sri Raghav

Admin