ಹಾಫ್ ಅಂಡ್ ಚೀಪ್ ದರದಲ್ಲಿ ಮಹಿಳೆಯರಿಗಾಗಿ ‘ಇಂದಿರಾ ಸಾರಿಗೆ’

Bus-Women

ಬೆಂಗಳೂರು, ನ.11-ಬಡ ಮತ್ತು ದುಡಿಯುವ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಇಂದಿರಾ ಸಾರಿಗೆಯನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.ಶ್ರಮಿಕರು, ಕಟ್ಟಡ ಕಾರ್ಮಿಕರು, ಬಡವರು, ನಿರ್ಗತಿಕರು, ಅನಾಥರಿಗೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಯಿತು. ಇದೀಗ ಗಾರ್ಮೆಂಟ್ಸ್‍ಗಳು ಹಾಗೂ ಇನ್ನಿತರ ಕಡೆ ದುಡಿಯುವ ಮಹಿಳೆಯರನ್ನು ಗಮನದಲ್ಲಿರಿಸಿಕೊಂಡು ಅವರ ಓಡಾಟಕ್ಕೆ ಅನುಕೂಲವಾಗುವಂತೆ ಶೇ.50ರ ರಿಯಾಯಿತಿ ದರದಲ್ಲಿ ಬಸ್‍ಗಳ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲು ಇಂದಿರಾ ಸಾರಿಗ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಬಿಎಂಟಿಸಿ ಹಾಗೂ ನಾಲ್ಕು ಸಾರಿಗೆ ನಿಗಮಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ. ಈಗಾಗಲೇ ಅಟಲ್ ಸಾರಿಗೆ ಜಾರಿಯಲ್ಲಿದೆ. ಮಹಿಳೆಯರನ್ನು ಗಮನದಲ್ಲಿರಿಸಿಕೊಂಡು ಇಂದಿರಾ ಸಾರಿಗೆಯನ್ನು ಜಾರಿಗೊಳಿಸಲಾಗುತ್ತಿದೆ. ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಂದಿನ ತಿಂಗಳ ಅಂತ್ಯದಲ್ಲಿ ಈ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಹುತೇಕ ಗ್ರಾಮೀಣ ಪ್ರದೇಶದ ಮಹಿಳೆಯರು ರಾಜಧಾನಿ ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಹಾಗೂ ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಪ್ರತಿದಿನ ತಮ್ಮ ಕೆಲಸಗಳಿಗೆ ತೆರಳಲು ಬಿಎಂಟಿಸಿ ಬಸ್‍ಗಳನ್ನು ಆಶ್ರಯಿಸಿದ್ದಾರೆ. ಅವರಿಗೆ ಬಸ್‍ಗಳ ಪ್ರಯಾಣದ ವೆಚ್ಚದಲ್ಲಿ ಶೇ.50ರಷ್ಟು ತಗ್ಗಿಸಿದರೆ ಜೀವನಕ್ಕೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಸಾಧ್ಯ-ಅಸಾಧ್ಯತೆಗಳನ್ನು ಚರ್ಚಿಸಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin