ಫಿಲಿಪೈನ್ಸ್ ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

Modi--002

ಮನಿಲಾ, ನ.12-ಭಾರತ-ಆಸಿಯಾನ್ ಶೃಂಗಸಭೆ ಸೇರಿದಂತೆ ಹಲವು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಫಿಲಿಪೈನ್ಸ್‍ಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜಧಾನಿ ಮನಿಲಾದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ದ್ವೀಪರಾಷ್ಟ್ರಕ್ಕೆ ಮೂರು ದಿನಗಳ ಭೇಟಿ ವೇಳೆ ಪ್ರಧಾನಿ ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸುವರು. ಅಲ್ಲದೇ ಆಸಿಯಾನ್ ಶೃಂಗಸಭೆಯ 50ನೇ ವಾರ್ಷಿಕೋತ್ಸವದಲ್ಲಿ ಸ್ಥಳೀಯ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‍ಸಿಇಪಿ) ನಾಯಕರ ಸಭೆಯಲ್ಲಿ ಹಾಗೂ ಆಸಿಯಾನ್ ಆರ್ಥಿಕ ಮತ್ತು ಹೂಡಿಕೆ ಶೃಂಗಸಭೆಯಲ್ಲಿ ಭಾಗವಹಿಸುವರು.

ಪ್ರಧಾನಿ ಫಿಲಿಪೈನ್ಸ್ ಅಧ್ಯಕ್ಷ ರೊಡ್ರಿಗೋ ಡುಟೆರ್ಟೆ ಸೇರಿದಂತೆ ವಿವಿಧ ವಿಶ್ವ ನಾಯಕರನ್ನು ಭೇಟಿ ಮಾಡುವರು. ಆಸಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆಯ ನಾಯಕರೊಂದಿಗೂ ಅವರು ಸಂವಾದ ನಡೆಸಲಿದ್ದಾರೆ. ಫಿಲಿಪೈನ್ಸ್‍ನಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಮಾತನಾಡುವ ಕಾರ್ಯಕ್ರಮವೂ ಇದೆ.  ದೆಹಲಿಯಿಂದ ಫಿಲಿಪೈನ್ಸ್‍ಗೆ ಪ್ರಯಾಣ ಬೆಳೆಸುವುದಕ್ಕೂ ಮುನ್ನ ನಿನ್ನೆ ತಮ್ಮ ಪ್ರವಾಸದ ಬಗ್ಗೆ ಟ್ವೀಟ್ ಮಾಡಿದ್ದ ಮೋದಿ, ಆಸಿಯಾನ್ ದೇಶಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಸದೃಢಗೊಳಿಸಲಾಗುವುದು ಎಂದು ತಿಳಿಸಿದ್ದರು.

Facebook Comments

Sri Raghav

Admin