ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

RSS-Worker--02

ತ್ರಿಶ್ಶೂರ್(ಕೇರಳ), ನ.13-ಕೇರಳದ ನೆನ್‍ಮೆನಿಯಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ ಖಂಡಿಸಿ ಬಿಜೆಪಿ ವಿವಿಧೆಡೆ ಪ್ರತಿಭಟನೆ ನಡೆಸಿತ್ತು. ತ್ರಿಶ್ಶೂರ್ ಜಿಲ್ಲೆಯ ಗುರುವಾಯೂರು ಮತ್ತು ಮನಲೂರ್ ಸೇರಿದಂತೆ ವಿವಿಧೆಡೆ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ರಸ್ತೆಗಳಲ್ಲಿ ವಾಹನಗಳ ಸಂಚಾರ ವಿರಳವಾಗಿತ್ತು. ಬಿಜೆಪಿ ಇಂದು ಕರೆ ನೀಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್ ಮಾಡಲಾಗಿತ್ತು. ನಿನ್ನೆ ಹಾಡಹಗಲೇ ಸಿಪಿಐ(ಎಂ) ಕಾರ್ಯಕರ್ತರೆನ್ನಾದ ಗುಂಪೊಂದು ಆರ್‍ಎಸ್‍ಎಸ್‍ನ ಆನಂದನ್ (23) ಎಂಬ ಯುವಕನನ್ನು ಕೊಚ್ಚಿ ಕೊಲೆ ಮಾಡಿತ್ತು. ಈ ಘಟನೆ ನಂತರ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿತ್ತು.

Facebook Comments

Sri Raghav

Admin