ಜಾರ್ಜ್ ರಾಜೀನಾಮೆ ನೀಡಲೇಬೇಕು : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Eshwarapa-01

ಬೆಳಗಾವಿ, ನ.13- ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆಗೆ ಬಿಜೆಪಿ ಆಗ್ರಹಿಸಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಮ್ಮ ಪಕ್ಷದ ವತಿಯಿಂದ ವಿಧಾನ ಪರಿಷತ್‍ನಲ್ಲಿ ನಿಲುವಳಿ ಸೂಚನೆ ಮಂಡಿಸಲಾಗುವುದು. ಸಚಿವರ ರಾಜೀನಾಮೆಗೆ ಆಗ್ರಹಿಸಿ ಪಟ್ಟು ಹಿಡಿಯುತ್ತವೆ ಎಂದರು.

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಅವರು ಪ್ರಮುಖ ಆರೋಪಿ ಎಂದು ಸಿಬಿಐ ಎಫ್‍ಐಆರ್ ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅವರು ರಾಜೀನಾಮೆ ನೀಡಬೇಕಾಗಿತ್ತು. ಇನ್ನೂ ರಾಜೀನಾಮೆ ನೀಡದ ಕಾರಣ ಅವರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಒತ್ತಾಯ ಮಾಡುತ್ತೇವೆ ಎಂದು ಅವರು ಹೇಳಿದರು. ಮುಖ್ಯಮಂತ್ರಿಯವರು ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಸಿಎಂ ತಲೆಯಲ್ಲಿ ಸಗಣಿ ತುಂಬಿದೆ ಎಂದು ತಿರುಗೇಟು ನೀಡಿದ ಅವರು, ಸಿಎಂ ಇರುವುದೇ ನಮ್ಮನ್ನು ಅವಮಾನಿಸಲು ಎಂದರು.

Facebook Comments

Sri Raghav

Admin