ಮೈಸೂರು ಪೊಲೀಸರ ಆಪರೇಷನ್ ಚೀತಾ, 5.61ಲಕ್ಷ ರೂ. ದಂಡ ವಸೂಲಿ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು, ನ.13- ನಗರ ಸಂಚಾರ ಪೊಲೀಸರು ಆಪರೇಷನ್ ಚೀತಾ ನಡೆಸಿ 5066 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಂದ 5,61,100 ರೂ.ಗಳನ್ನು ದಂಡ ದರೂಪದಲ್ಲಿ ಪೊಲೀಸರು ಸಂಗ್ರಹಿಸಿದ್ದಾರೆ.
ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ತಪಾಸಣೆ ನಡೆಸಿ 987 ವಾಹನಗಳನ್ನು ಪರಿಶೀಲಿಸಿದ ಪೊಲೀಸರು, ಈ ಪೈಕಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ  56  ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಇವರ ಪರವಾನಗಿ ಅಮಾನತು ಗೊಳಿಸಲು ಸಾರಿಗೆ ಇಲಾಖೆಗೆ ಶಿಫಾರಸು ಮಾಡಿದ್ದಾರೆ.

Facebook Comments

Sri Raghav

Admin