ವೈದ್ಯರು ರೋಗಿಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲಿ

ಈ ಸುದ್ದಿಯನ್ನು ಶೇರ್ ಮಾಡಿ

med-1

ಬೆಳಗಾವಿ, ನ.13- ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದು ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಆರೋಗ್ಯ ಸಚಿವ ರಮೇಶ್‍ಕುಮಾರ್ ಪ್ರತಿಕ್ರಿಯೆ ನೀಡಿದರು.  ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕ ಬೇಡ ಎನ್ನುವುದು ಖಾಸಗಿ ವೈದ್ಯರ ಅಭಿಪ್ರಾಯವಾಗಿದೆ. ಆದರೆ, ಈ ವಿಧೇಯಕ ಜಂಟಿ ಸದನ ಸಮಿತಿ ಪರಿಶೀಲಿಸಿ ಆ ಸಮಿತಿ ಸರ್ಕಾರದ ಮುಂದೆ ವರದಿ ಮಂಡಿಸುತ್ತದೆ. ಆ ಸಮಿತಿಯ ವರದಿಯಂತೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳುತ್ತದೆ. ಇದು ನಮ್ಮ ಒಬ್ಬರ ನಿರ್ಧಾರವಲ್ಲ ಎಂದು ರಮೇಶ್‍ಕುಮಾರ್ ಹೇಳಿದರು. ಖಾಸಗಿ ವೈದ್ಯರು, ರೋಗಿಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲಿ. ಸಾಧ್ಯತಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

Facebook Comments