ಎಂಆರ್‍ಪಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರುವವರ ವಿರುದ್ಧ ಶಿಸ್ತು ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

Bar-And-Wine

ಬೆಳಗಾವಿ, ನ.14 – ಕೆಲವು ಚಿಲ್ಲರೆ ಮದ್ಯ ಮಾರಾಟಗಾರರು ಎಂಆರ್‍ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಬಕಾರಿ ಸಚಿವ ತಿಮ್ಮಾಪುರ್ ವಿಧಾನಸಭೆಗೆ ತಿಳಿಸಿದ್ದಾರೆ. ಜೆಡಿಎಸ್ ಶಾಸಕರಾದ ಎಚ್.ಡಿ.ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿಲ್ಲರೆ ಮದ್ಯ ಮಾರಾಟ ಸನ್ನದುದಾರರು ಅಬಕಾರಿ ಶುಲ್ಕ ಮತ್ತು ಹೆಚ್ಚುವರಿ ಅಬಕಾರಿ ಶುಲ್ಕವನ್ನು ಪಾವತಿಸಿ ಕೆಎಸ್‍ಬಿಸಿಎಲ್ ನಿಂದ ವಿತರಣೆಯಾದ ಮದ್ಯವನ್ನು ಎಂಆರ್‍ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಸರ್ಕಾರ ಗಮನಿಸಿದೆ.

ತೆರಿಗೆ ಪಾವತಿಸದ ಮತ್ತು ನಕಲಿ ಮದ್ಯವನ್ನು ಎಂಆರ್‍ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಲಿಕ್ಕರ್ ಶಾಪ್ ಮಾಲೀಕರೊಂದಿಗೆ ಶಾಮೀಲಾಗಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ನಕಲಿ ಮದ್ಯ ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿರುವುದು ಹಾಗೂ ಸರ್ಕಾರಕ್ಕೆ ಲಕ್ಷಾಂತರ ರೂ. ತೆರಿಗೆ ನಷ್ಟವಾಗುತ್ತಿರುವ ಮಾಹಿತಿ ಇಲ್ಲ ಎಂದು ತಿಳಿಸಿದರು.

Facebook Comments

Sri Raghav

Admin