ಏಪ್ರಿಲ್’ಗೆ ಪೂರ್ಣವಾಗಲಿದೆ ಶಿರಾಡಿ ಘಾಟ್ ಹೆದ್ದಾರಿ ಕಾಮಗಾರಿ

ಈ ಸುದ್ದಿಯನ್ನು ಶೇರ್ ಮಾಡಿ

H-C-Mahadevappa--01

ಬೆಳಗಾವಿ, ನ.14- ಬಹು ನಿರೀಕ್ಷಿತ ಬೆಂಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ಹೆದ್ದಾರಿ ಕಾಮಗಾರಿ ಏಪ್ರಿಲ್ ತಿಂಗಳಲ್ಲಿ ಪೂರ್ಣವಾಗಲಿದ್ದು, ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು ವಿಧಾನ ಪರಿಷತ್‍ನಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಗಣೇಶ್ ಕಾರ್ನಿಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಶಿರಾಡಿಘಾಟ್ ಕಾಮಗಾರಿ ಪ್ರಗತಿಯಲ್ಲಿದ್ದು, ಏಪ್ರಿಲ್ ತಿಂಗಳ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಳಿಕ ಸಂಚಾರ ಸೇವೆಗೆ ಲಭ್ಯವಾಗಲಿದೆ ಎಂದು ಹೇಳಿದರು.

ಶಿರಾಡಿಘಾಟ್ 2ನೆ ಹಂತದ ಕಾಮಗಾರಿ ಕೆಂಪು ಹೊಳೆಯಿಂದ ಅಡ್ಡಹೊಳೆವರೆಗೆ ಕಾಮಗಾರಿ ನಡೆಸಲು ಓಷಿಯನ್ ಕಂಪೆನಿಗೆ ಗುತ್ತಿಗೆ ನೀಡಲಾಗಿದೆ. ಜನವರಿ ತಿಂಗಳಿನಿಂದ ಕಾಮಗಾರಿ ಪ್ರಾರಂಭವಾಗಿ ಏಪ್ರಿಲ್‍ಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇನ್ನು ಮುಂದೆ ಶಿರಾಡಿಘಾಟ್‍ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹಾಕಿ ಮಡಿಕೇರಿ ಮಾರ್ಗದಲ್ಲಿ ಸಂಚರಿಸಲು ಕ್ರಮ ಕೈಗೊಳ್ಳಲಾಗುವುದು. ಇಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದರು. ಪರಿಸರಕ್ಕೆ ಧಕ್ಕೆಯಾಗದಂತೆ ಕಾಮಗಾರಿ ನಡೆಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಇದೊಂದು ಸೂಕ್ಷ್ಮ ವಲಯವಾಗಿರುವುದರಿಂದ ನದಿಯ ಮೂಲ, ಪರಿಸರ, ಪ್ರಾಣಿ-ಪಕ್ಷಿಗಳಿಗೆ ತೊಂದರೆಯಾಗಲಿದೆ. ಹಾಗಾಗಿ ಸರ್ಕಾರ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದರು.

Facebook Comments

Sri Raghav

Admin