ಕೇಂದ್ರದ ಅನುದಾನ ಬಳಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿಲ್ಲ : ಎಚ್.ಸಿ. ಮಹದೇವಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

H-C-Mahadevappa--01

ಬೆಳಗಾವಿ, ನ.14-ಕೇಂದ್ರದಿಂದ ಬಿಡುಗಡೆಯಾಗಿರುವ ಅನುದಾನದಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ತಾರತಮ್ಯ ಮಾಡದೆ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ವಿಧಾನ ಪರಿಷತ್‍ನಲ್ಲಿ ಸ್ಪಷ್ಟಪಡಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರದೀಪ್ ಶೆಟ್ಟರ್ ಆರೋಪಕ್ಕೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಯಾವುದೆ ರೀತಿಯ ತಾರತಮ್ಯ ಮಾಡದೆ ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಇದಕ್ಕೆ ಕೇಂದ್ರದಿಂದಲೂ ಪ್ರಶಂಸೆ ವ್ಯಕ್ತವಾಗಿದೆ ಎಂದು ತಿಳಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಜಿಲ್ಲೆಗಳಲ್ಲಿನ ರಸ್ತೆ ಅಭಿವೃದ್ಧಿಗೆ 2016-17ನೆ ಸಾಲಿನಲ್ಲಿ 5 ಕೋಟಿ, 17-18ರಲ್ಲಿ ಪುನಃ 5 ಕೋಟಿ ಅನುದಾನ ನೀಡಲಾಗಿದೆ. 16-17ರಲ್ಲಿ 27 ಕಾಮಗಾರಿಗಳು ಮಂಜೂರಾಗಿದ್ದವು.

ಇದರಲ್ಲಿ 16 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದರೆ, 12 ಕಾಮಗಾರಿಗಳು ಮಾತ್ರ ಬಾಕಿ ಇವೆ. 17-18ರಲ್ಲಿ ಕೇಂದ್ರ ರಸ್ತೆ ನಿಧಿ ಯೋಜನೆಯಡಿ 2 ಕಾಮಗಾರಿಗಳು ಮುಂಜೂರಾಗಿವೆ. ಇದಕ್ಕೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು. ಈಗಿನ ಕೇಂದ್ರ ಸರ್ಕಾರ ಯೋಜನೆಗಳಿಗೆ ಸಾಕಷ್ಟು ಹಣ ನೀಡಿದೆ. ಹಿಂದಿನ ಯುಪಿಎ ಸರ್ಕಾರವೂ ಬಹಳಷ್ಟು ಅನುದಾನ ನೀಡಿತ್ತು. ಇದರಲ್ಲಿ ತಾರತಮ್ಯದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.

Facebook Comments