ಮಕ್ಕಳ ದಿನಾಚರಣೆ : ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Chindren-Day--01

ನವದೆಹಲಿ, ನ.14-ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಹರ್‍ಲಾಲ್ ನೆಹರು ಅವರ ಜನ್ಮ ದಿನಾಚರಣೆ ಪ್ರಯುಕ್ತ ಇಂದು ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಮನಮೋಹನ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಮಕ್ಕಳ ದಿನಾಚರಣೆ ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ವಿವಿಧ ಪಕ್ಷಗಳ ಮುಖಂಡರು ಸಹ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಶುಭಾಶಯ ಸಲ್ಲಿಸಿದ್ದಾರೆ.  ನೆಹರು 128ನೇ ಜನ್ಮ ದಿನಾಚರಣೆ ಅಂಗವಾಗಿ ಅವರ ಗುಣಗಾನ ಮಾಡಿದ್ದಾರೆ.   ಆಸಿಯಾನ್ ಶೃಂಗಸಭೆಗಾಗಿ ಫಿಲಿಪೈನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವಿಟ್ಟರ್ ಮೂಲಕ ಭಾರತದ ಪ್ರಥಮ ಪ್ರಧಾನಮಂತ್ರಿಯನ್ನು ಸ್ಮರಿಸಿ, ಮಕ್ಕಳ ದಿನಾಚರಣೆ ಶುಭಾಶಯ ಸಲ್ಲಿಸಿದ್ದಾರೆ.

Facebook Comments

Sri Raghav

Admin