ವೈದ್ಯರು ಮುಷ್ಕರದಿಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ : ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

jagadish--shettar

ಬೆಳಗಾವಿ(ಸುವರ್ಣಸೌಧ), ನ.14-ರಾಜ್ಯ ಸರ್ಕಾರ ಇದೇ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ಖಾಸಗಿ ವೈದ್ಯಕೀಯ ಸೌಲಭ್ಯಗಳ ನಿಯಂತ್ರಣ ಕಾಯ್ದೆಯಿಂದಾಗಿ ವೈದ್ಯರು ಈಗಾಗಲೇ ಬೀದಿಗೆ ಇಳಿದಿದ್ದಾರೆ. ಮುಂದಾಗಲಿರುವ ಎಲ್ಲಾ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕು ಎಂದು ಪ್ರತಿಪಕ್ಷದ ನಾಯಕ ಜಗದೀಶ್‍ಶೆಟ್ಟರ್ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ವೈದ್ಯರ ವಿರೋಧದ ನಡುವೆಯೂ ಯಾವ ಕಾರಣಕ್ಕಾಗಿ ಮಸೂದೆಯನ್ನು ಮಂಡಿಸಲು ಮುಂದಾಗಿದೆ ಎಂಬುದು ಅರ್ಥವಾಗುತ್ತಿಲ್ಲ. ಇದರ ಪರಿಣಾಮ ಈಗಾಗಲೇ ಮೂವರು ರೋಗಿಗಳು ಮೃತಪಟ್ಟಿದ್ದು, ಸಾವಿರಾರು ಮಂದಿ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಸರ್ಕಾರ ಕೂಡಲೇ ಮಸೂದೆಯನ್ನು ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದರು. ಈಗಾಗಲೇ ನಮ್ಮ ಪಕ್ಷ ಮಸೂದೆ ಮಂಡನೆಗೆ ವಿರೋಧ ವ್ಯಕ್ತಪಡಿಸಿದೆ. ಆದರೂ ಸರ್ಕಾರ ಹಠಕ್ಕೆ ಬಿದ್ದು ಮಸೂದೆ ಮಂಡನೆ ಮಾಡಲು ಮುಂದಾಗಿರುವುದು ದುರದೃಷ್ಟಕರ. ಯಾವ ಕಾರಣಕ್ಕಾಗಿ ಮಸೂದೆ ಮಂಡನೆ ಮಾಡಲು ಮುಂದಾಗಿದೆ ಎಂದು ಪ್ರಶ್ನಿಸಿದರು.

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಈಗಾಗಲೇ ನಿಲುವಳಿ ಸೂಚನೆ ಮಂಡಿಸಲು ಸ್ಪೀಕರ್ ಅವರಿಗೆ ನೋಟೀಸ್ ನೀಡಿದ್ದೇವೆ ಎಂದು ಹೇಳಿದರು.

Facebook Comments

Sri Raghav

Admin