ಜಾರ್ಜ್ ಡಿವೈಎಸ್‍ಪಿ ಗಣಪತಿ ಪ್ರಕರಣದ ಸಾಕಷ್ಟು ಸಾಕ್ಷ್ಯಗಳು ನಾಶ ಮಾಡಿದ್ದಾರೆ : ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

Jagadish-Shettar-01

ಬೆಳಗಾವಿ (ಸುವರ್ಣಸೌಧ), ನ.15- ಡಿವೈಎಸ್‍ಪಿ ಆತ್ಮಹತ್ಯೆ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಗಳು ನಾಶವಾಗಿವೆ. ಎಫ್‍ಎಸ್‍ಎಲ್ ವರದಿ ಬರುವ ಮುನ್ನವೇ ಸಿಐಡಿ ಕ್ಲೀನ್‍ಚಿಟ್ ನೀಡಿದೆ. ಸಚಿವರು ಅಧಿಕಾರದಲ್ಲಿ ಮುಂದುವರಿದರೆ ಮತ್ತಷ್ಟು ಸಾಕ್ಷ್ಯಗಳು ನಾಶವಾಗುತ್ತವೆ. ಈ ಹಿನ್ನೆಲೆಯಲ್ಲಿ ಜಾರ್ಜ್ ಅವರು ರಾಜೀನಾಮೆ ಕೊಡಬೇಕೆಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಾಕಷ್ಟು ಅನುಮಾನ ಉಂಟಾಗಿದೆ. ಸಿಬಿಐ ತನಿಖೆ ಕೈಗೊಂಡ ಸಂದರ್ಭದಲ್ಲಿ ಲಾಡ್ಜ್‍ನಲ್ಲಿ ಬುಲೆಟ್ ಪತ್ತೆಯಾಗಿದೆ. ಸಾಕ್ಷ್ಯ ನಾಶ ಮಾಡುವಂತಹ ಕೆಲಸ ಸಾಕಷ್ಟು ನಡೆದಿದೆ. ಎಸ್‍ಎಂಎಸ್‍ಗಳನ್ನು ಡಿಲೀಟ್ ಮಾಡಲಾಗಿದೆ. ಸಮಗ್ರ ತನಿಖೆಯ ಅಗತ್ಯವಿದೆ ಎಂದು ಹೇಳಿದ ಅವರು, ಜಾರ್ಜ್ ರಾಜೀನಾಮೆಗಾಗಿ ಹೋರಾಟ ಮುಂದುವರೆಸುತ್ತೇವೆ. ಸಿಐಡಿ ತನಿಖೆ ನಡೆಸುವ ಸಂದರ್ಭದಲ್ಲಿ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸಿಬಿಐ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಇದು ನಮ್ಮ ಆಶಯವಾಗಿದೆ. ಮಹದಾಯಿ ವಿವಾದ ಬಗೆಹರಿಸುವಂತೆ ಹುಬ್ಬಳ್ಳಿಯ ನಮ್ಮ ನಿವಾಸದ ಬಳಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದು ತಿಂಗಳಲ್ಲಿ ಸಿಹಿ ಸುದ್ದಿ ನೀಡುತ್ತೇವೆ ಎಂದು ಯಡಿಯೂರಪ್ಪನವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹೋರಾಟ ಹಿಂಪಡೆದಿದ್ದಾರೆ.
ಮಹದಾಯಿ ವಿವಾದದಲ್ಲಿ ನಾವು ಸುಮ್ಮನೆ ಕುಳಿತಿಲ್ಲ. ಗೋವಾ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸುವ ಪ್ರಯತ್ನ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

Facebook Comments

Sri Raghav

Admin