ಪ್ರತಿಪಕ್ಷಗಳ ಪ್ರತಿಭಟನೆಗೆ ಸೊಪ್ಪು ಹಾಕದಂತೆ ಶಾಸಕರಿಗೆ ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Cm-Siddarmaiah--01

ಬೆಳಗಾವಿ (ಸುವರ್ಣಸೌಧ), ನ.15- ಜಾರ್ಜ್ ಪ್ರಕರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಗೆ ಸೊಪ್ಪು ಹಾಕುವುದು ಬೇಡ. ಅದನ್ನು ಸಮರ್ಥವಾಗಿ ಎದುರಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ತಮ್ಮ ಶಾಸಕರಿಗೆ ಸೂಚನೆ ನೀಡಿದ್ದಾರೆ. ರಾಜಕೀಯ ಕಾರಣಕ್ಕೆ ಅನಗತ್ಯವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರದ 24ಕ್ಕೂ ಹೆಚ್ಚು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಅವರು ಕೂಡ ಅಧಿಕಾರದಲ್ಲಿ ಮುಂದುವರಿದಿದ್ದಾರೆ. ಆದರೆ, ರಾಜಕೀಯ ಕಾರಣದ ಹಿನ್ನೆಲೆಯಲ್ಲಿ ಜಾರ್ಜ್ ಅವರ ರಾಜೀನಾಮೆಯನ್ನು ಬಿಜೆಪಿ ಕೇಳುತ್ತಿದೆ. ಇದಕ್ಕೆ ಸೊಪ್ಪು ಹಾಕುವುದು ಬೇಡ. ನಾವೆಲ್ಲರೂ ಒಟ್ಟಾಗಿ ಅವರ ಪ್ರತಿಭಟನೆಗೆ ತಕ್ಕ ಪ್ರತಿಕ್ರಿಯೆ ನೀಡೋಣ. ಸದನದಲ್ಲಿ ಎಲ್ಲರೂ ಹಾಜರಿರಬೇಕು ಎಂದು ಸೂಚನೆ ನೀಡಿದರು.

ಇಂದಿನ ಶಾಸಕಾಂಗ ಸಭೆಗೆ ಹಲವು ಸಚಿವರು, ಶಾಸಕರು ಗೈರಾಗಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ಪ್ರಮೋದ್ ಮಧ್ವರಾಜ್, ಅಂಬರೀಶ್, ಮಾಲೀಕಯ್ಯ ಗುತ್ತೇದಾರ್, ಪ್ರಿಯಾಂಕ ಖರ್ಗೆ ಸೇರಿದಂತೆ ಹಲವರು ಗೈರಾಗಿದ್ದರು.

Facebook Comments

Sri Raghav

Admin