‘ಮಹದಾಯಿ ವಿವಾದ ಕುರಿತು ಇನ್ನೊಂದು ತಿಂಗಳಲ್ಲಿ ಸಿಹಿ ಸುದ್ದಿ’

ಈ ಸುದ್ದಿಯನ್ನು ಶೇರ್ ಮಾಡಿ

jagadish--shettar

ಬೆಳಗಾವಿ (ಸುವರ್ಣಸೌಧ), ನ.15- ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹದಾಯಿ ವಿವಾದದ ಬಗ್ಗೆ ಇನ್ನೊಂದು ತಿಂಗಳಲ್ಲಿ ಸಿಹಿ ಸುದ್ದಿ ನೀಡುವುದಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಇಂದಿಲ್ಲಿ ಹೇಳಿದರು. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಮಹದಾಯಿ, ಕಳಸಾ ಬಂಡೂರಿಗಾಗಿ ಉತ್ತರ ಕರ್ನಾಟಕದ ಜನ ಹೋರಾಟ ನಡೆಸುತ್ತಿದ್ದಾರೆ. ನಮ್ಮ ಪಕ್ಷ ಗೋವಾ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿದ್ದು, ಇನ್ನೊಂದು ತಿಂಗಳಲ್ಲಿ ಸಿಹಿ ಸುದ್ದಿ ನೀಡಲಿದ್ದೇವೆ ಎಂದು ಹೇಳಿದರು.

ಹುಬ್ಬಳ್ಳಿಯ ನನ್ನ ನಿವಾಸದ ಎದುರು ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದಾರೆ. ಅದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಭರವಸೆ ಹಿನ್ನೆಲೆಯಲ್ಲಿ ವಾಪಸ್ ಪಡೆಯಲಾಗಿದೆ. ಈ ವಿವಾದ ಬಗೆಹರಿಸುವ ಸಂಬಂಧ ನಾವು ಸುಮ್ಮನೆ ಕುಳಿತಿಲ್ಲ. ಗೋವಾ ಮುಖ್ಯಮಂತ್ರಿ ಜತೆ ಮಾತುಕತೆ ಪ್ರಯತ್ನ ನಡೆಸಿದ್ದೇವೆ ಎಂದು ಶೆಟ್ಟರ್ ತಿಳಿಸಿದರು.

Facebook Comments

Sri Raghav

Admin