ಮೈಸೂರು ಸಾಹಿತ್ಯ ಸಮ್ಮೇಳನದ ಹಿನ್ನೆಲೆ 20ರಂದು ಮೆರವಣಿಗೆ ತಾಲೀಮು

ಈ ಸುದ್ದಿಯನ್ನು ಶೇರ್ ಮಾಡಿ

my-lan-1

ಮೈಸೂರು,ನ.15-ಮುಂದಿನ ವಾರ ನಗರದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಇದೇ 20ರಂದು ಅರಮನೆ ಆವರಣದಲ್ಲಿ ಮೆರವಣಿಗೆ ತಾಲೀಮು ನಡೆಸಲಾಗುವುದು. ಜಿಲ್ಲಾಧಿಕಾರಿ ರಂದೀಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ನ.20ರಂದು ಬೆಳಗ್ಗೆ 9 ಗಂಟೆಗೆ ಅರಮನೆ ಆವರಣದಲ್ಲಿ ಸುಮಾರು 2000 ಮಂದಿ ಸ್ವಯಂಸೇವಕರಿಂದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ -2017ರ ಆಕೃತಿ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕರ್ನಾಟಕ ಭೂಪಟ ನಕ್ಷೆ, ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಮಹಾಕೃತಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿ 50 ವರ್ಷ ಸಂದ ಹಿನ್ನೆಲೆಯಲ್ಲಿ ಶ್ರೀರಾಮಾಯಣ ದರ್ಶನಂ-50 ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಹಳದಿ ಮತ್ತು ಕೆಂಪು ಟೋಪಿ ಧರಿಸಿ ಆಕೃತಿ ರಚಿಸಬೇಕೆಂದು ತಿಳಿಸಿದರು. ಈ ದೃಶ್ಯವನ್ನು ಡ್ರೋಣ್ ಕ್ಯಾಮರಾ ಮೂಲಕ ಸೆರೆ ಹಿಡಿದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಮೆರಗು ನೀಡುವಂತೆ ಅದಕ್ಕೆ ಪೂರ್ವ ಸಿದ್ದತೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಮ್ಮೇಳನದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳ ಅಂದಾಜು ಪಟ್ಟಿಗೆ ಅನುಮೋದನೆ ನೀಡಲು ಜಿಲ್ಲಾಧಿಕಾರಿಗಳು ಅಂದಜು ಸಮಿತಿಯನ್ನು ರಚಿಸಿದ್ದಾರೆ.

Facebook Comments

Sri Raghav

Admin