ಯೋಗಿ ಭೇಟಿ ಮಾಡಿದ ರವಿಶಂಕರ ಗುರೂಜಿ

ಈ ಸುದ್ದಿಯನ್ನು ಶೇರ್ ಮಾಡಿ

Yogi-Adityanath--02212

ಲಖನೌ, ನ. 15- ತಮ್ಮ ಅಯೋಧ್ಯೆ (ರಾಮ ಜನ್ಮಭೂಮಿ) ಭೇಟಿಯ ಮುನ್ನಾ ದಿನವಾದ ಇಂದು ಅಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ ಗುರೂಜಿ ಅವರು ಇಂದಿಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೊಂದು ಸೌಜನ್ಯದ ಭೇಟಿಯಾಗಿದ್ದು, ಸುಮಾರು 15-20 ನಿಮಿಷಗಳ ಕಾಲ ಇಬ್ಬರೂ ಪರಸ್ಪರ ಮಾತನಾಡಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಆದಿತ್ಯನಾಥ್ ಅವ ನಿಲುವು ನಿಚ್ಚಳವಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣದಲ್ಲಿ ಪಾರ್ಟಿಯಾಗಿಲ್ಲ. ನ್ಯಾಯಾಲಯದ ತೀರ್ಪಿಗೆ ನಾವು ಬದ್ಧರಾಗಿರುತ್ತೇವೆ. ಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಯವುದೇ ರೀತಿಯ ಇತ್ಯರ್ಥವನ್ನೂ ನಾವು ಸ್ವಾಗತಿಸುತ್ತೇವೆ ಎಂದು ಭೇಟಿಯ ನಂತರ ರವಿಶಂಕರ್ ಗುರೂಜಿ ಹೇಳಿದ್ದಾರೆ. ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ವ್ಯಕ್ತಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲು ರವಿಶಂಕರ್ ಅವರು ಸ್ ಇಚ್ಛೆಯಿಂದ ನಾಳೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

Facebook Comments

Sri Raghav

Admin