ವಿಧಾನಸಭೆಯಲ್ಲಿ ಧರಣಿ ವಾಪಸ್ ಪಡೆದ ಬಿಜೆಪಿ

ಈ ಸುದ್ದಿಯನ್ನು ಶೇರ್ ಮಾಡಿ

Session-Protest--02

ಬೆಳಗಾವಿ(ಸುವರ್ಣಸೌಧ), ನ.15-ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ನಿನ್ನೆಯಿಂದ ವಿಧಾನಸಭೆಯಲ್ಲಿ ಆರಂಭಿಸಿದ್ದ ಧರಣಿಯನ್ನು ಇಂದು ಬಿಜೆಪಿ ವಾಪಸ್ ಪಡೆಯಿತು.
ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಬಿಜೆಪಿ ಸಂಸದರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ಆರಂಭಿಸಿದರು.

ಈ ವೇಳೆ ಬಿಜೆಪಿ ಕಾಂಗ್ರೆಸ್ ಶಾಸಕರ ನಡುವೆ ವಾಗ್ವಾದ ನಡೆದು ಕೆಲಕಾಲ ಗದ್ದಲವೂ ಉಂಟಾಯಿತು. ವಿಧಾನ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ನಿಲುವಳಿ ಸೂಚನೆ ಈಗಾಗಲೇ ತಿರಸ್ಕಾರವಾಗಿರುವುದರಿಂದ ಬೇರೆ ರೂಪದಲ್ಲಿ ನೋಟೀಸ್ ಕೊಟ್ಟರೆ ಚರ್ಚೆಗೆ ಅವಕಾಶ ಕೊಡುವ ಭರವಸೆ ನೀಡಿದರು. ಅದಕ್ಕೆ ಸಮ್ಮತಿಸಿದ ಬಿಜೆಪಿ ಶಾಸಕರು ಧರಣಿ ಕೈಬಿಟ್ಟು ತಮ್ಮ ಸ್ವಸ್ಥಾನಕ್ಕೆ ತೆರಳಿದರು. ನಂತರ ಅಧಿಕೃತ ಕಾರ್ಯಕಲಾಪಗಳು ಆರಂಭವಾದವು.
ಇದಕ್ಕೂ ಮುನ್ನ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿದೆ. ಸಿಬಿಐ ತನಿಖೆ ನಡೆಸುತ್ತಿದೆ. ನಿನ್ನೆ ಗಣಪತಿ ತಂಗಿದ್ದ ಮಡಿಕೇರಿ ಲಾಡ್ಜ್‍ನಲ್ಲಿ ಗುಂಡು ಪತ್ತೆಯಾಗಿದೆ. ಈ ವಿಚಾರಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಬೇಕಾಗಿದೆ. ಚರ್ಚೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಮಾತು ಮುಂದುವರೆಸಿದ ಶೆಟ್ಟರ್, ಕಾರ್ಯಕಲಾಪಗಳಿಗೆ ಅಡ್ಡಿಪಡಿಸಬೇಕೆಂಬುದು ನಮ್ಮ ಉದ್ದೇಶವಲ್ಲ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ಕಳಸಾ ಬಂಡೂರಿ ವಿಚಾರ, ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಾದ ಅಗತ್ಯವಿದೆ. ಗಣಪತಿ ಆತ್ಮಹತ್ಯೆ ಬಗ್ಗೆ ಹೆಚ್ಚಿನ ಚರ್ಚೆ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಬೇರೆ ರೂಪದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ವಿಧಾನ ಸಭಾಧ್ಯಕ್ಷರು ಹೇಳಿದ ನಂತರ ಧರಣಿ ಕೈಬಿಟ್ಟರು.

Facebook Comments

Sri Raghav

Admin