ಸುವರ್ಣ ಸೌಧದ ಎದುರು ಸಾವಿರಾರು ರೈತರು ಪ್ರತಿಭಟನೆ

Formers-Protest--01

ಬೆಳಗಾವಿ,ನ.15-ಕಬ್ಬಿಗೆ ಎಸ್‍ಎಪಿ ಬೆಲೆ ನಿಗದಿ ಮಾಡಬೇಕು, ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಬೇಕು, ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ ಪರಿಹಾರದ ಹಣವನ್ನು ಕೂಡಲೇ ಪಾವತಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧದ ಎದುರು ಸಾವಿರಾರು ರೈತರು ಪ್ರತಿಭಟನೆ ನಡೆಸಿದರು.

ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಕಾಲಮಿತಿಯೊಳಗೆ ಮುಗಿಸಬೇಕು. ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಲೆ ನಿಗದಿ ಮಾಡಿ ಜಾರಿಗೆ ತರಬೇಕು. ಕೃಷಿಗೆ ಸಾಲ ಮುಕ್ತ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಿದರು. ಕೇಂದ್ರ ಮತ್ತು ರಾಜ್ಯ ಸರ್ಕಾಗಳು ಕೃಷಿ ಸಂಕಷ್ಟಕ್ಕೆ ಸ್ಪಂದಿಸದೆ ಕಾರ್ಪೊರೇಟ್ ಶಕ್ತಿಗಳು ರೂಪಿಸಿರುವ ನೀತಿಗಳ ಪರ ಕೆಲಸ ಮಾಡುತ್ತಿದ್ದು , ಶ್ರಮಿಕರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ.

ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಸಂಪೂರ್ಣ ಕಡೆಗಣಿಸಿದ್ದು, ದೇಶದ ವಿಮೆ ಕಂಪನಿಗಳಿಗೆ ಹಾಗೂ ಕಾರ್ಪೊರೇಟ್ ಸಂಸ್ಥೆಗಳಿಗೆ ಮಾತ್ರ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಪ್ರತಿಭಟನಾನಿರತ ರೈತರು ಆರೋಪಿಸಿದರು.

Facebook Comments

Sri Raghav

Admin