ಜೆಡಿಎಸ್ ನ ಫ್ಲೆಕ್ಸ್ ಹರಿದ ಪ್ರಕರಣ, ಶಾಸಕ ಎಂ.ಟಿ.ಕೃಷ್ಣಪ್ಪ ವಿರುದ್ಧ ದೂರು ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

turuvekere
ತುರುವೇಕೆರೆ,ನ.16-ಇದೇ ತಿಂಗಳು 20 ರಂದು ನಡೆಯಲಿರುವ ಜೆಡಿಎಸ್‍ನ ಉಚ್ಚಾಟಿತ ಮುಖಂಡ ಮಾಜಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಎಂ.ಡಿ.ರಮೇಶ್‍ಗೌಡರ ಅಭಿಮಾನಿಗಳು ಹಮ್ಮಿಕೊಂಡಿರುವ ಸ್ವಾಭಿಮಾನ ಸಮಾವೇಶಕ್ಕಾಗಿ ಹಾಕಲಾಗಿದ್ದ ಫ್ಲೆಕ್ಸ್, ಬ್ಯಾನರ್, ಭಿತ್ತಿಪತ್ರಗಳನ್ನು ಹರಿದು ಹಾಕಲಾಗಿದೆ ಎಂಬ ದೂರಿನ ಮೇರೆಗೆ ಶಾಸಕ ಎಂ.ಟಿ.ಕೃಷ್ಣಪ್ಪ ಸೇರಿದಂತೆ 11 ಜನರ ವಿರುದ್ಧ ಸ್ಥಳೀಯ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೆಡಿಎಸ್ ನಿಂದ ಉಚ್ಚಾಟಿಸಲ್ಪಟ್ಟಿರುವ ಮಾಜಿ ತಾಲೂಕು ಪಂಚಾಯ್ತಿ ಅಧ್ಯಕ್ಷ ಎಂ.ಡಿ.ರಮೇಶ್ ಗೌಡರನ್ನು ಜೆಡಿಎಸ್‍ನಲ್ಲೇ ಉಳಿಸಿಕೊಳ್ಳುವ ಸಲುವಾಗಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರಚಾರಕ್ಕಾಗಿ ಹಾಕಲಾಗಿದ್ದ ಭಿತ್ತಿಪತ್ರಗಳು, ಫ್ಲೆಕ್ಸ್ ಬ್ಯಾನರ್‍ಗಳನ್ನು ದುರುದ್ದೇಶಪೂರ್ವಕವಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಅವರ ಬೆಂಬಲಿಗರು ಹರಿದು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನ.20ರಂದು ನಡೆಯುವ ಕಾರ್ಯಕ್ರಮಕ್ಕೆ ಸೂಕ್ತ ಬಂದೋಬಸ್ತ್ ಒದಗಿಸಬೇಕು, ನಷ್ಟ ಉಂಟು ಮಾಡಿರುವವರ ವಿರುಧ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ. ನ.13ರಂದು ನಡೆದ ಘಟನೆಯ ಚಿತ್ರೀಕರಿಸಿದ ವಿಡಿಯೋ ಸಹ ಪೊಲಿಸರಿಗೆ ದಾಖಲೆಗಾಗಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲಿಸರು ಈ ಪ್ರಕರಣ ಕುರಿತು ನ್ಯಾಯಾಲಯಕ್ಕೆ ಎಫ್ ಐ ಆರ್ ಸಲ್ಲಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Facebook Comments

Sri Raghav

Admin