ಮುಷ್ಕರ ಹಿಂಪಡೆಯುವಂತೆ ವೈದ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-CM--01

ಬೆಳಗಾವಿ, ನ.16- ಮುಷ್ಕರವನ್ನು ಹಿಂಪಡೆಯಬೇಕೆಂದು ಖಾಸಗಿ ವೈದ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಖಾಸಗಿ ವೈದ್ಯಕೀಯ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕ ಮಂಡಿಸುತ್ತಿದ್ದೇವೆ. ಇನ್ನೂ ಸದನದಲ್ಲಿ ವಿಧೇಯಕ ಮಂಡನೆಯಾಗಿಲ್ಲ. ನಿಮ್ಮೊಂದಿಗೆ ಚರ್ಚಿಸಿ ಮಸೂದೆ ಮಂಡಿಸುತ್ತೇವೆ. ಮುಷ್ಕರ ನಡೆಸುವುದು ಬೇಡ. ಇದರಿಂದ ಅಮಾಯಕರಿಗೆ ತೊಂದರೆಯಾಗುತ್ತದೆ. ದಯವಿಟ್ಟು ಮುಷ್ಕರ ಹಿಂಪಡೆಯಿರಿ ಎಂದು ಮುಷ್ಕರ ನಿರತ ವೈದ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್‍ನಲ್ಲಿ ಮನವಿ ಮಾಡಿದ್ದಾರೆ.

ಖಾಸಗಿ ವ್ಯೆಧ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯಿದೆ ಬೇಕೇ..? ಬೇಡವೇ ?

View Results

Loading ... Loading ...

ಖಾಸಗಿ ವೈದ್ಯರ ಮುಖಂಡರುಗಳೊಂದಿಗೆ ಚರ್ಚಿಸಿ ವಿಧೇಯಕ ಮಂಡನೆ ಮಾಡುತ್ತೇವೆ. ವೈದ್ಯರು ಮತ್ತು ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡೇ ವಿಧೇಯಕ ಜಾರಿಗೆ ತರುತ್ತೇವೆ. ಮುಷ್ಕರದಿಂದ ರೋಗಿಗಳಿಗೆ ತೊಂದರೆಯಾಗುತ್ತದೆ. ಮುಷ್ಕರವನ್ನು ಹಿಂಪಡೆಯಬೇಕೆಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin