90 ಅಡಿ ಆಳದ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಈ ಸುದ್ದಿಯನ್ನು ಶೇರ್ ಮಾಡಿ

hasan

ಅರಸೀಕೆರೆ, ನ.17- ಆಯ ತಪ್ಪಿಬಾವಿಗೆ ಬಿದ್ದ ವ್ಯಕ್ತಿಯನ್ನು ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ತಾಲೂಕಿನ ಗಂಡಸಿ ಹೋಬಳಿ ಮಾರಶೆಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜ್ (48) ಎಂಬಾತನನ್ನು ರಕ್ಷಿಸಲಾಗಿದೆ.
ಈತ ಎಂದಿನಂತೆ ತನ್ನ ಜಮೀನಿಗೆ ಮುಂಜಾನೆ ಹೋದ ವೇಳೆ ಆಯ ತಪ್ಪಿ ನೀರು ಇರದ 90 ಅಡಿ ಆಳದ ಬಾವಿಗೆ ಬಿದ್ದಿದ್ದು, ಇದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಸುದ್ದಿಯನ್ನು ಮುಟ್ಟಿಸಿದರು.

ಸುದ್ದಿ ತಿಳಿದ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ್ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಸಿದ್ದರಾಮೇಶ್ ಮತ್ತು ಗಂಡಸಿ ಠಾಣೆಯ ಎಎಸ್‍ಐ ಲಕ್ಷ್ಮಣ್ ಸ್ಥಳಕ್ಕೆ ದೌಡಾಯಿಸಿ ಬಾವಿಗೆ ಬಿದ್ದು ನರಳಾಡುತ್ತಿದ್ದ ನಾಗರಾಜ್‍ನನ್ನ ಅಗ್ನಿ ಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೇಲೆತ್ತಿದರು. ಈ ಸಂಬಂಧ ಪ್ರತಿಕ್ರಿಯಿಸಿದ ನಾಗರಾಜ್ ಬಾವಿಗೆ ಆಯ ತಪ್ಪಿ ಬಿದ್ದೆ ದೇವರಂತೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ನನಗೆ ಮರುಜನ್ಮ ನೀಡಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.

Facebook Comments

Sri Raghav

Admin