ಹಣ ದೋಚಲು ಬ್ಯಾಂಕ್-ಎಟಿಎಂ ಬಳಿ ಹೊಂಚು ಹಾಕುತ್ತಿದ್ದ 3 ಕಳ್ಳರ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

robb-1
ತುಮಕೂರು,ನ.18- ಬ್ಯಾಂಕ್ ಹಾಗೂ ಎಟಿಎಂನಿಂದ ಹಣ ತೆಗೆದುಕೊಂಡು ಹೋಗುವವರ ಗಮನ ಬೇರೆಡೆ ಸೆಳೆದು ಹಣ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 8.50 ಲಕ್ಷ ನಗದು ಹಾಗೂ 80 ಸಾವಿರ ಬೆಲೆ ಬಾಳುವ ಮೋಟಾರ್ ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಿರಣ್(25), ಕಣ್ಣನ್ (35), ತುಳಸಿ(25) ಬಂಧಿತ ಕಳ್ಳರು. ಈ ಮೂವರು ತುಮಕೂರು ನಗರದಲ್ಲಿ ಬ್ಯಾಂಕ್ ಮತ್ತು ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಹೊರಬರುತ್ತಿದ್ದವರನ್ನು ಗುರಿಯಾಗಿಸಿಕೊಂಡು ಅವರ ಗಮನ ಬೇರೆಡೆ ಸೆಳೆದು ಹಣ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಈ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು , ಇವರಿಂದ 8.50 ಲಕ್ಷ ನಗದು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ 80 ಸಾವಿರ ರೂ. ಮೌಲ್ಯದ ಯೂನಿ ಕಾರ್ನ್ ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಗೋಪಿನಾಥ್ ಹಾಗೂ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ಶೋಭ ರಾಣಿ ಅವರ ಮಾರ್ಗದರ್ಶನದಲ್ಲಿ ನಗರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಕೆ.ಎಸ್.ನಾಗರಾಜ್, ವೃತ್ತ ನಿರೀಕ್ಷಕ ಸಿ.ಎಚ್.ರಾಮಕೃಷ್ಣಯ್ಯ ಅವರ ನೇತೃತ್ವದಲ್ಲಿ ಪಿಎಸ್‍ಐ ರಾಜು ಹಾಗೂ ಸಿಬ್ಬಂದಿ ಮೋಹನ್‍ಕುಮಾರ್ ಅವರನ್ನೊಳಗೊಂಡ ತಂಡ ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Facebook Comments

Sri Raghav

Admin