ಕಾಂಗ್ರೆಸ್ 128 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆಯಂತೆ..!

ಈ ಸುದ್ದಿಯನ್ನು ಶೇರ್ ಮಾಡಿ

cha-shara

ಚನ್ನಪಟ್ಟಣ, ನ.20-ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ರಾಜ್ಯದ 128ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾರದಾಗೌಡ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಗತಿಪರ, ಅಭಿವೃದ್ಧಿ ಪರ ಆಡಳಿತ ನೀಡಿದೆ. ಇದು ರಾಜ್ಯದ ಜನತೆಯ ಮನಮುಟ್ಟಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಉತ್ತಮ ಅಭಿಪ್ರಾಯವೂ ಇದೆ. ಈ ನಿಟ್ಟಿನಲ್ಲಿ 128ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿ, ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ವರಿಷ್ಟರು ತಮ್ಮ ಸೇವೆಯನ್ನು ಗುರುತಿಸಿ ಗುರುತರವಾದ ಜವಾಬ್ದಾರಿಯನ್ನು ನೀಡಿದ್ದಾರೆ. ಅದನ್ನು ಯಾವುದೇ ಹಿಂಜರಿಕೆಯಿಲ್ಲದೆ ನಿಭಾಯಿಸಿ, ಪಕ್ಷದ ಸದೃಢತೆಗೆ ಶ್ರಮಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡುವುದಾಗಿ ತಿಳಿಸಿದರು.
ನನ್ನನ್ನು ನಂಬಿ ಮೋಸ ಹೋಗಿ ಎಂಬ ತತ್ವದೊಂದಿಗೆ ಕೇಂದ್ರದ ಬಿಜೆಪಿ ಸರ್ಕಾರದ ಮೋದಿ ಆಡಳಿತ ನಡೆಸುತ್ತಿದೆ. ಮೋದಿ ಅವರು ದೇಶದ ಜನತೆಗೆ ನಮೋ ಎಂಬ ಸಂದೇಶದೊಂದಿಗೆ ಪ್ರಚಾರ ಪಡೆದರು. ಅದರ ಪೂಣಾರ್ಥ ನಂಬಿ ಮೋಸ ಹೋಗು ಎಂಬುದೆ ಹೊರತು, ದೇಶ ಉದ್ದಾರ ಮಾಡುವುದಲ್ಲ ಎಂದು ದೂರಿದರು. ಕಾಂಗ್ರೆಸ್ ಸರ್ಕಾರ ಕಳೆದ ನಾಲ್ಕುವರೆ ವರ್ಷದಲ್ಲಿ ತಾಲೂಕಿನ ಯಾವ ಅಭಿವೃದ್ಧಿಗೆ ಎಚ್ಟು ಹಣ ಬಿಡುಗಡೆ ಮಾಡಿದೆ ಎಂಬುದನ್ನು ಪಟ್ಟಿ ಮಾಡಿ ಕೈ ಪಿಡಿ ಸಿದ್ದ ಮಾಡಲಾಗುತ್ತಿದೆ. ಮುಂದಿನ ತಿಂಗಳಲ್ಲಿ ಸಿ.ಎಂ. ಸಿದ್ದರಾಮಯ್ಯ ತಾಲೂಕಿನಲ್ಲಿ ಕೆಲ ಅಭಿವೃದ್ಧಿ ಕೆಲಸಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸುತ್ತಿದ್ದು, ಅಂದು ಸಾಕ್ಷಿ ಬಿಡುಗಡೆ ಮಾಡುತ್ತೇವೆ ಎಂದು ಶಾರದಾಗೌಡ ಹೇಳಿದರು.

Facebook Comments

Sri Raghav

Admin