ಬಂದ್ ಆಗಲಿವೆ ಲೈವ್ ಬ್ಯಾಂಡ್‍ ಗಳು, ನಿರ್ದಾಕ್ಷಿಣ್ಯ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

rama
ಬೆಳಗಾವಿ, ನ.21- ರಾಜ್ಯದಲ್ಲಿ ಲೈವ್ ಬ್ಯಾಂಡ್‍ಗಳಿಗೆ ಕಡಿವಾಣ ಹಾಕಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸುವರ್ಣಸೌಧ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವಕರು ಹಾಳಾಗುವುದನ್ನು ತಡೆಯುವ ಉದ್ದೇಶದಿಂದ ಲೈವ್ ಬ್ಯಾಂಡ್‍ಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಈಗಾಗಲೇ ಲೈವ್ ಬ್ಯಾಂಡ್‍ಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದ್ದು ಲೈವ್ ಬ್ಯಾಂಡ್‍ಗಳ ಹಿಂದೆ ಯಾರೇ ಪ್ರಭಾವಿಗಳಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂದು ಸಚಿವರು ಹೇಳಿದರು. ರಾಜಧಾನಿ ಬೆಂಗಳೂರಿನಲ್ಲಿ ಲೈವ್ ಬ್ಯಾಂಡ್‍ಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯುವ ಪೀಳಿಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

Facebook Comments

Sri Raghav

Admin