ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ, ಮದುವೆಗೆ ಹೊರಟ್ಟಿದ್ದ ಮೂವರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

kalu
ಕಲಬುರಗಿ,ನ.21-ಕ್ರೂಸರ್‍ನಲ್ಲಿ ಮದುವೆಗೆಂದು ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಇತರ ಕೆಲವರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಕ್ರೂಸರ್ ಸೊಲ್ಲಾಪುರದಿಂದ ಬೀದರ್ ತೆರಳತಿತ್ತು. ಲಾರಿ ಬೀದರ್‍ನಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಮೂಲದವರಾದ ಇವರು ಬೀದರ್‍ಗೆ ಸಂಬಂಧಿಕರ ಮದುವೆಯೊಂದರಲ್ಲಿ ಪಾಲ್ಗೊಳ್ಳಲು ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಇವರಿದ್ದ ಕ್ರೂಸರ್ ಬರುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಮೂವರು ಸ್ಥಳದಲ್ಲೇ ಅಸುನೀಗಿದ್ದು , ಗಾಯಾಳುಗಳನ್ನು ಬೀದರ್ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ಹುಲ್ಲೂರು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments