‘ಆಂದೋಲನ’ಕಾರ ಇನ್ನಿಲ್ಲ, ಅಗಲಿದ ಹಿರಿಯ ಪತ್ರಕರ್ತ ‘ರಾಜಶೇಖರ ಕೋಟಿ’ಯವರಿಗೆ ನಮನ

ಈ ಸುದ್ದಿಯನ್ನು ಶೇರ್ ಮಾಡಿ

koti

ಬೆಂಗಳೂರು, ನ.23-ಮೈಸೂರು ಆಂದೋಲನ ಪತ್ರಿಕೆಯ ಸಂಪಾದಕರಾದ ರಾಜಶೇಖರ ಕೋಟಿ (71) ಇನ್ನಿಲ್ಲ.ಇಂದು ಬೆಳಗಿನ ಜಾವ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಕಾರ್ಯನಿಮಿತ್ತ ಆಗಮಿಸಿದ್ದ ಅವರು ನಿನ್ನೆ ರಾತ್ರಿ ಖಾಸಗಿ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡಿದ್ದರು.ಈ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಮಲ್ಯ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಹಿಂದಿರುಗಿದ್ದಾರೆ. ಮತ್ತೆ ಸ್ವಲ್ಪ ಸಮಯದ ನಂತರ ಎದೆ ನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗಮಧ್ಯೆ ಹೃದಯಾಘಾತವಾಗಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

koti-1

ಬೆಂಗಳೂರಿನಿಂದ ಪಾರ್ಥೀವ ಶರೀರವನ್ನು ಮೈಸೂರಿನ ರಾಮಾನುಜ ರಸ್ತೆ, 7ನೇ ಕ್ರಾಸ್‍ನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ದು ಅಲ್ಲಿ ಅಂತಿಮ ದರ್ಶನಕ್ಕೆ ಇಡಲಾಯಿತು. ಸಾಹಿತಿ ದೇವನೂರು ಮಹದೇವ್, ಬಿಜೆಪಿ ಮುಖಂಡ ರಾಮ್‍ದಾಸ್, ಕೃಷ್ಣಮೂರ್ತಿ, ಮಾಜಿ ಸ್ಪೀಕರ್ ಕೃಷ್ಣ, ಜಿಲ್ಲಾಧಿಕಾರಿ ರಂದೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪತ್ರಕರ್ತ ಮಿತ್ರರು, ಬರಹಗಾರರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಅವರ ಸ್ನೇಹಿತರು, ಬಂಧು-ಮಿತ್ರರು ಅಂತಿಮ ದರ್ಶನ ಪಡೆದರು.

ಪ್ರೆಸ್‍ಕ್ಲಬ್ ಆಫ್ ಬೆಂಗಳೂರು, ವರದಿಗಾರರ ಕೂಟ, ಕಾರ್ಯನಿರತ ಪತ್ರಕರ್ತರ ಸಂಘ, ಮಾಧ್ಯಮ ಅಕಾಡೆಮಿ ಸೇರಿದಂತೆ ವಿವಿಧ ಪತ್ರಿಕಾ ಸಂಘಟನೆಗಳ ಸದಸ್ಯರು, ಮುದ್ರಣ, ವಿದ್ಯುನ್ಮಾನ ಮಾಧ್ಯಮದ ಅವರ ಸ್ನೇಹಿತರು ಅಗಲಿದ ರಾಜಶೇಖರ ಕೋಟಿ ಅವರಿಗೆ ಅಂತಿಮ ನಮನ ಸಲ್ಲಿಸಿದರು. ರಾಜಶೇಖರ ಕೋಟಿ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅವರ ಅಂತ್ಯಸಂಸ್ಕಾರವನ್ನು ಇಂದು ಸಂಜೆ 5 ಗಂಟೆಗೆ ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಗುವುದು.

Facebook Comments

Sri Raghav

Admin