ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಪ್ರಜ್ವಲ್ ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

Prajwal--02

ಬೆಂಗಳೂರು, ನ.27- ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಜ್ಯಾತೀತ ಜನತಾದಳದ ಪ್ರಧಾನಕಾರ್ಯದರ್ಶಿಯನ್ನಾಗಿ ಪ್ರಜ್ವಲ್‍ರೇವಣ್ಣ ಅವರನ್ನು ನೇಮಕ ಮಾಡಿ ಮಹಾಪ್ರಧಾನಕಾರ್ಯದರ್ಶಿ ಬಿ.ಎಂ.ಫಾರೂಕ್ ಅವರು ಆದೇಶ ಹೊರಡಿಸಿದ್ದಾರೆ.

ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷ ಹಾಗೂ ಸಿದ್ದಾಂತಗಳಿಗೆ ಬದ್ಧರಾಗಿ ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಾಕಾಂಕ್ಷಿಯಾಗಿರುವ ಪ್ರಜ್ವಲ್ ರೇವಣ್ಣವರು ಬೇಲೂರು, ರಾಜರಾಜೇಶ್ವರಿನಗರ, ಹುಣಸೂರು ವಿಧಾನಸಭೆ ಕ್ಷೇತ್ರಗಳ ಪೈಕಿ ಯಾವುದಾದರೊಂದರಲ್ಲಿ ಸ್ಪರ್ಧಿಸುವ ಆಸಕ್ತಿ ಹೊಂದಿದ್ದಾರೆ. ಪಕ್ಷ ಅವಕಾಶ ನೀಡಿದರೆ ಚುನಾವಣೆಗೆ ಸ್ಪರ್ಧಿಸಲು ಅವರು ಉತ್ಸುಕರಾಗಿದ್ದಾರೆ. ಪಕ್ಷ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.

Facebook Comments

Sri Raghav

Admin