ಗುಜರಾತ್ ಚುನಾವಣೆ : 76 ಅಭ್ಯರ್ಥಿಗಳ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Congress0-2

ನವದೆಹಲಿ, ನ.27-ಗುಜರಾತ್ ವಿಧಾನಸಭೆಗೆ ಡಿ.14ರಂದು ನಡೆಯುವ ಎರಡನೇ ಹಂತದ ಚುನಾವಣೆಗಾಗಿ ಕಾಂಗ್ರೆಸ್ 76 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಗುಜರಾತ್‍ನ ಪಶ್ಚಿಮ ಭಾಗದಲ್ಲಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ನಿನ್ನೆ ರಾತ್ರಿ ಬಿಡುಗಡೆ ಮಾಡಿದರು. ಈ ಪಟ್ಟಿಯಲ್ಲಿ 11 ಎಸ್‍ಟಿ ಮತ್ತು ಮೂರು ಎಸ್‍ಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.  182 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಗುಜರಾತ್‍ನಲ್ಲಿ ಡಿ.9 ಮತ್ತು 14ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿ.18ರಂದು ಫಲಿತಾಂಶ ಘೋಷಣೆಯಾಗಲಿದೆ.

Facebook Comments

Sri Raghav

Admin