ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಕುಂಬಾರರ ಪ್ರತಿಭಟನೆ

Kumbararu--02

ಬೆಂಗಳೂರು, ನ.28- ಕುಂಬಾರರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಅಖಿಲ ಕರ್ನಾಟಕ ಕುರುಬರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ಅಹಿಂದ ಹೋರಾಟ ಸಮಿತಿ ನೇತೃತ್ವದಲ್ಲಿ ಸಮಾಜ ಬಾಂಧವರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಪುರಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಕುಂಬಾರರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ನಾಗೇಶ್ ನಮ್ಮ ಕುಂಬಾರ ಸಮಾಜ ಶೈಕ್ಷಣಿಕ, ಆರ್ಥಿಕ , ಸಾಮಾಜಿಕವಾಗಿ ತುಂಬಾ ಹಿಂದುಳಿದಿದೆ. ಸಮಾಜದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕೇ ಎಂದು ಆಗ್ರಹಿಸಿದರು.

ಎಲ್ಲಾ ಸರ್ಕಾರಗಳು ನಮ್ಮನ್ನು ಮತ ಬ್ಯಾಂಕ್ ಮಾಡಿಕೊಂಡವೇ ಹೊರತು ಸರಿಯಾಗಿ ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಾಜ ಬಾಂಧವರು ಒಗ್ಗೂಡಿ ಹೋರಾಟ ಮಾಡಿದರೆ ಮಾತ್ರ ಸರ್ಕಾರದ ಕಣ್ಣು ತೆರೆಯಲಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಮಂಜುನಾಥ್, ಅಹಿಂದ ಹೋರಾಟ ಸಮಿತಿ ಅಧ್ಯಕ್ಷ ಮುತ್ತುರಾಜ್ ಮತ್ತಿತರರು ಭಾಗವಹಿಸಿದ್ದರು.  ಬೆಂಗಳೂರಿನಲ್ಲಿ ವಾಸ ಮಾಡುತ್ತಿರುವ ಬಡ ಕುಂಬಾರರಿಗೆ ಉಚಿತ ನಿವೇಶನ ಕೊಡಬೇಕು. ವಿಶೇಷ ಸೌಲಭ್ಯ ಕಲ್ಪಿಸಬೇಕು. ಎಲ್ಲಾ ರಾಜಕೀಯ ಪಕ್ಷಗಳು ಕುಂಬಾರ ನಾಯಕರಿಗೆ ಪ್ರಾಧಾನ್ಯತೆ ನೀಡಬೇಕೆಂದು ಆಗ್ರಹಿಸಲಾಗಿದೆ.

Facebook Comments

Sri Raghav

Admin