ವಿದೇಶದಲ್ಲಿ ಪದ್ಮಾವತಿ ಚಿತ್ರ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ನಕಾರ

ಈ ಸುದ್ದಿಯನ್ನು ಶೇರ್ ಮಾಡಿ

Padmavati--01

ನವದೆಹಲಿ, ನ.28-ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಸಿನಿಮಾವನ್ನು ವಿದೇಶದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡದಂತೆ ಕೋರಿ ಸಲ್ಲಿಸಲಾಗಿದ್ದ ಹೊಸ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಇದರಿಂದಾಗಿ ಹೊರ ದೇಶಗಳಲ್ಲಿ ಚಾರಿತ್ರಿಕ ಹಿನ್ನೆಲೆಯ ಸಿನಿಮಾ ಬಿಡುಗಡೆಗೆ ಇದ್ದ ಅಡ್ಡಿ ನಿವಾರಣೆಯಾಗಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವೊಂದು ಇಂದು ಈ ಅರ್ಜಿಯನ್ನು ತಳ್ಳಿ ಹಾಕಿತು. ಅಲ್ಲದೇ ಪದ್ಮಾವತಿ ಸಿನಿಮಾ ವಿರುದ್ಧ ಉನ್ನತ ಸ್ಥಾನವನ್ನು ಅಲಂಕರಿಸಿರುವ ವ್ಯಕ್ತಿಗಳು ನೀಡುತ್ತಿರುವ ಹೇಳಿಕೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಸೆನ್ಸಾರ್ ಮಂಡಳಿಯಿಂದ ಈ ಸಿನಿಮಾಗೆ ಇನ್ನೂ ಪ್ರಮಾಣಪತ್ರ ನೀಡಿಲ್ಲ. ಅದಕ್ಕೆ ಮುಂಚಿತವಾಗಿಯೇ ಚಿತ್ರದ ಬಗ್ಗೆ ನೀಡುತ್ತಿರುವ ಹೇಳಿಕೆಗಳು ಸಮಂಜಸವಲ್ಲ ಎಂದು ಹೇಳಿದೆ.  ನೃತ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದಾಗಿ ಮಾನಹಾನಿ ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಸಂಜಯ್‍ಲೀಲಾ ಬನ್ಸಾಲಿ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಿಬಿಐಗೆ ನಿರ್ದೇಶನ ನೀಡುವಂತೆಯೂ ಹಿರಿಯ ವಕೀಲ ಎಂ.ಎಲ್.ಶರ್ಮ ಕೋರಿದ್ದರು.

Facebook Comments

Sri Raghav

Admin