ಜಿಎಸ್‍ಟಿ ಅಲ್ಲ ‘ಗಬ್ಬರ್ ಸಿಂಗ್ ಟ್ಯಾಕ್ಸ್’ : ಕಾಂಗ್ರೆಸ್ ವಿನೂತನ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Gabbar-Singh--01

ಸೂರತ್, ನ.29-ಸೂಪರ್‍ಹಿಟ್ ಹಿಂದಿ ಸಿನಿಮಾ ಶೋಲೆಯ ಗಬ್ಬರ್‍ಸಿಂಗ್‍ನಂತೆ ಬಟ್ಟೆ ಧರಿಸಿ, ಕೈಯಲ್ಲಿ ಏರ್ ರೈಫಲ್ ಮತ್ತು ಗನ್‍ಗಳನ್ನು ಹಿಡಿದ ಕಾಂಗ್ರೆಸ್ ಕಾರ್ಯಕರ್ತರು ಜಿಎಸ್‍ಟಿಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಬಣ್ಣಿಸಿ ವಿನೂತನ ಪ್ರತಿಭಟನೆ ನಡೆಸಿದ ಪ್ರಸಂಗ ಗುಜರಾತ್‍ನ ಸೂರತ್‍ನಲ್ಲಿ ನಿನ್ನೆ ನಡೆದಿದೆ.

ಈ ಪ್ರತಿಭಟನೆ ನಡೆಸಿದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಈ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಪೂರ್ವಾನುಮತಿ ಪಡೆದಿಲ್ಲ. ಅಲ್ಲದೇ ಸಾರ್ವಜನಿಕ ಸ್ಥಳದಲ್ಲಿ ರೈಫಲ್ ಮತ್ತು ಗನ್‍ಗಳನ್ನು ಹಿಡಿದು ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ರಾಹುಲ್ ಅವರು ಗುಜರಾತ್ ಚುನಾವಣಾ ರ್ಯಾಲಿ ವೇಳೆ ಜಿಎಸ್‍ಟಿಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಲೇವಡಿ ಮಾಡಿದ್ದರು.

Facebook Comments

Sri Raghav

Admin