ನನ್ನ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ : ಪ್ರಜ್ವಲ್ ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

Prajwal-Revanna--02

ಬೇಲೂರು, ನ.29- ನಮ್ಮ ಕಾರ್ಯಕರ್ತರ ಸಹಕಾರದಿಂದ ನಾನು ಚಿಕ್ಕ ವಯಸ್ಸಿನಲ್ಲಿಯೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಲು ಕಾರಣವಾಗಿದ್ದು, ನನ್ನ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು. ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಪ್ರಥಮ ಬಾರಿಗೆ ಬೇಲೂರಿಗೆ ಆಗಮಿಸಿದ ಅವರು ಇಲ್ಲಿನ ಚನ್ನಕೇಶವ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರ ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ, ಅಲ್ಲದೆ ಹಂತ ಹಂತವಾಗಿ ರಾಜ್ಯ ಪ್ರವಾಸ ಕೈಗೊಂಡು ಯುವಕರನ್ನು ಸಂಘಟಿಸುತ್ತ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕುಮಾರಣ್ಣರ ಮಾರ್ಗದರ್ಶನ ಸಲಹೆ ಸೂಚನೆಯಂತೆ ಕಾರ್ಯನಿರ್ವಹಿಸುತ್ತೇನೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಪಕ್ಷ ಸಂಘಟಿಸಿ ಕುಮಾರಣ್ಣರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಕ್ಕೆ ಶ್ರಮಿಸುತ್ತೇನೆ ಹಾಗೂ ಈಗಾಗಲೆ ಕುಮಾರಣ್ಣರ ವಿಕಾಸ ಯಾತ್ರೆಗೆ ರಾಜ್ಯದಲ್ಲಿ ಅತ್ಯಂತ ಹೆಚ್ಚು ಜನ ಬೆಂಬಲ ಸಿಗುತ್ತಿದೆ ಎಂದರು.  ಮುಂಬರುವ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ನಾವುಗಳು ಸಹ ಕಾರ್ಯಕರ್ತರಂತೆ ಆಕಾಂಕ್ಷಿಗಳಾಗಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಹಾಗೂ ರಾಜ್ಯಾಧ್ಯಕ್ಷರು ಮತ್ತು ಚುನಾವಣಾ ಸಮಿತಿ ಯಾವ ನಿರ್ದಾರ ತೆಗೆದು ಕೊಳ್ಳುತದೊ ಅದಕ್ಕೆ ನಾವು ಬದ್ದರಾಗಿದ್ದು, ಪಕ್ಷದಿಂದ ಟಿಕೇಟ್ ನೀಡಿದರೆ ಸ್ಪರ್ಧಿಸುತ್ತೇವೆ. ಇಲ್ಲದಿದ್ದಲ್ಲಿ ರಾಜ್ಯಾಧ್ಯಂತ ಪಕ್ಷ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದರ ಜೊತೆಗೆ ನಮ್ಮ ಪಕ್ಷವನ್ನು ಬಲಿಷ್ಟ ಗೊಳಿಸುವುದಾಗಿ ತಿಳಿಸಿದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಸ್.ಲಿಂಗೇಶ್, ಹೆಚ್.ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಂ.ಎ.ನಾಗರಾಜ್, ತಾಲೂಕು ಅಧ್ಯಕ್ಷ ತೋಚ.ಸುಬ್ಬರಾಯ, ತಾಪಂ ಅಧ್ಯಕ್ಷ ಹರೀಶ್,ಪುರಸಭೈ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್, ಮಾಜಿ ಅಧ್ಯಕ್ಷ ಶ್ರೀನಿಧಿ, ಜಿಪಂ ಮಾಜಿ ಅಧ್ಯಕ್ಷ ಚಂದ್ರೇಗೌಡ ಮುಂತಾದವರಿದ್ದರು.

Facebook Comments

Sri Raghav

Admin