ಬೆಂಗಳೂರಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

Bangalore--01

ಬೆಂಗಳೂರು, ನ.29- ರಾಜ್ಯ ರಾಜಧಾನಿಯಲ್ಲೂ ವಾಯುಮಾಲಿನ್ಯ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ಒತ್ತಾಯಿಸಿ ರಾಜ್ಯಸಭಾ ಸದಸ್ಯರೊಬ್ಬರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ದೆಹಲಿಯ ಪರಿಸ್ಥಿತಿ ಬೆಂಗಳೂರಲ್ಲಿ ನಿರ್ಮಾಣವಾಗುವ ಮುನ್ನವೇ ಎಚ್ಚೆತ್ತುಕೊಂಡು ವಾಯುಮಾಲಿನ್ಯ ತಡೆಗೆ ಕ್ರಮ ಜರುಗಿಸುವಂತೆ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ರಾಜ್ಯಸಭಾ ಸದಸ್ಯ ಡಿ.ಕುಪೇಂದ್ರ ರೆಡ್ಡಿ ಪತ್ರ ಬರೆದಿದ್ದಾರೆ.

ನಗರದ ವಾಯುಮಾಲಿನ್ಯ ತಡೆಗೆ ತಕ್ಷಣವೇ ಕ್ರಮ ಜರುಗಿಸಿಬೇಕು. ಹೀಗೆಯೇ ಬಿಟ್ಟರೆ ದೊಡ್ಡ ಬೆಲೆ ತೆರಬೇಕಾಗಲಿದೆ. ದೆಹಲಿಯ ಪರಿಸ್ಥಿತಿ ಆಗುವ ಮುನ್ನ ಎಚ್ಚರಿಕೆಯ ಕ್ರಮ ತೆಗೆದುಕೊಳ್ಳಬೇಕು. ಮಾಲಿನ್ಯ ರಹಿತ ನಗರವನ್ನಾಗಿಸಲು ನಾಗರಿಕರಲ್ಲಿ ಅರಿವು ಮೂಡಿಸಬೇಕು. ಅದಕ್ಕಾಗಿ ಕಾಲಮಿತಿಯ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಪತ್ರದ ಮೂಲಕ ಡಿ. ಕುಪೇಂದ್ರ ರೆಡ್ಡಿ ಮನವಿ ಮಾಡಿದ್ದಾರೆ.

Facebook Comments

Sri Raghav

Admin