ಮೋದಿ ಹವಾ ನಡೆಯಲ್ಲ, ಗುಜರಾತ್ ನಲ್ಲಿ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರುತ್ತೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಮೈಸೂರು,ನ.29-ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹವಾ ದಿನೇ ದಿನೇ ಕಡಿಮೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೋದಿ ಅವರಿಗೆ ಜನ ಬೆಂಬಲ ಕಡಿಮೆಯಾಗುತ್ತಿದೆ. ಗುಜರಾತ್ ವಿಧಾನಸಭಾ ಚುನಾವಣೆ ಬಿಜೆಪಿಗೆ ಸೋಲು ಖಚಿತ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಸಮೀಕ್ಷೆ ಪ್ರಕಾರ ಬಿಜೆಪಿ ಸೋಲಲಿದ್ದು, ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದರು.

Facebook Comments

Sri Raghav

Admin