ಪತ್ರಕರ್ತರಿಬ್ಬರಿಗೆ ಜೈಲು ಶಿಕ್ಷೆ : ಸ್ಪೀಕರ್ ಕೋಳಿವಾಡ ಸೇರಿ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

K-B-Koliwada

ಬೆಂಗಳೂರು, ನ.30- ಪತ್ರಕರ್ತರಿಬ್ಬರಿಗೆ ಜೈಲು ಶಿಕ್ಷೆ ವಿಧಿಸಿರುವ ಸದನದ ನಿರ್ಣಯ ಪ್ರಶ್ನಿಸಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಸ್ಪೀಕರ್ ಕೋಳಿವಾಡ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಮಾನಹಾನಿ ವರದಿ ಹಿನ್ನೆಲೆಯಲ್ಲಿ ಪತ್ರಕರ್ತ ರವಿಬೆಳೆಗರೆ ಹಾಗೂ ಅನಿಲ್‍ರಾಜ್ ಎಂಬುವರಿಗೆ ಸದನ ಸಮಿತಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಪತ್ರಕರ್ತರಿಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬೊಪಣ್ಣ ಅವರ ಏಕ ಸದಸ್ಯ ಪೀಠ, ಸದನದ ತೀರ್ಮಾನವನ್ನು ಪ್ರಶ್ನಿಸಿ ಪ್ರಕರ್ತರು ನ್ಯಾಯಾಲಯಕ್ಕೆ ಬಂದಿದ್ದಾರೆ ಎಂದರೆ ಇದು ವಿಚಾರಣೆ ನಡೆಸಬಹುದಾದ ಅರ್ಜಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆ ಕೈಗೆತ್ತಿಕೊಂಡು ಸ್ಪೀಕರ್ ಕೋಳಿವಾಡ ಸೇರಿದಂತೆ ಪ್ರತಿವಾದಿಗಳೆಲ್ಲರಿಗೂ ನೋಟಿಸ್ ಜಾರಿ ಮಾಡಿದೆ.

ಶಾಸಕರ ವಿರುದ್ಧ ಅವಹೇಳನಕಾರಿ ವರದಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಪತ್ರಕರ್ತರ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲಾಗಿತ್ತು. ಈ ಪ್ರಕರಣವನ್ನು ಹಕ್ಕು ಬಾಧ್ಯತಾ ಸಮಿತಿಗೆ ವಹಿಸಲಾಗಿತ್ತು. ಈ ಸಮಿತಿ ವರದಿ ನೀಡಿದ ಹಿನ್ನೆಲೆಯಲ್ಲಿ ಇಬ್ಬರಿಗೆ ಒಂದು ವರ್ಷ ಜೈಲು ಹಾಗೂ ತಲಾ 10ಸಾವಿರ ದಂಡ ವಿಧಿಸಲಾಗಿತ್ತು. ಇತ್ತೀಚೆಗೆ ನಡೆದ ಬೆಳಗಾವಿಯ ಸುವರ್ಣಸೌಧದ ಅಧಿವೇಶನದಲ್ಲಿ ಪತ್ರಕರ್ತರ ಪರ ವಕೀಲ ಶಂಕರಪ್ಪ ಸ್ಪೀಕರ್ ಕೋಳಿವಾಡ ಅವರ ಕಚೇರಿಯಲ್ಲಿ ಲಿಖಿತ ವಾದ ಮಂಡಿಸಿದ್ದರು.

ಸದನ ಶಿಕ್ಷೆ ಕೊಡುವ ಅವಕಾಶ ಇಲ್ಲ ಎಂಬುದನ್ನು ತಮ್ಮ ವಾದದಲ್ಲಿ ಉಲ್ಲೇಖಿಸಿದ್ದರು. ಆದರೂ ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಅವರ ಅರ್ಜಿಯನ್ನು ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಲಯ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

Facebook Comments

Sri Raghav

Admin