ಮೆದುಳಿನಲ್ಲಿ ರಕ್ತಸ್ರಾವದಿಂದಾಗಿ ಮಾಜಿ ಕೇಂದ್ರ ಸಚಿವ ಎ.ಕೆ.ಆಂಟಿನಿ ಆಸ್ಪತ್ರೆಗೆ ದಾಖಲು

Antiny--02

ನವದೆಹಲಿ, ನ.30-ರಕ್ಷಣಾ ಖಾತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಧುರೀಣ ಎ.ಕೆ. ಆಂಟನಿ ಮೆದುಳಿನಲ್ಲಿ ರಕ್ತಸ್ರಾವದಿಂದಾಗಿ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ನಿವಾಸದಲ್ಲಿ ನಿನ್ನೆ ಮಧ್ಯಾಹ್ನ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ಕೇರಳದ ಪ್ರಭಾವಿ ಕಾಂಗ್ರೆಸ್ ನಾಯಕರಾದ ಆಂಟನಿ, ಯುಪಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದರು. ಏಳು ವರ್ಷಗಳ ಸುದೀರ್ಘ ಕಾಲ ಆ ಖಾತೆ ನಿರ್ವಹಿಸಿದ್ದ ಹೆಗ್ಗಳಿಗೆ ಅವರದ್ದು.

Facebook Comments

Sri Raghav

Admin