ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Police

ಬೀದರ್, ಡಿ.1- ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಅವರು ಅಸ್ವಸ್ಥರಾಗಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಹುಮ್ನಾಬಾದ್ ಹಾಗೂ ಬಾಲ್ಕಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಹಿಂದಿರುಗಿ ಬರುವಾಗ ಆರೋಗ್ಯ ದಲ್ಲಿ ಏರುಪೇರಾಗಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ಪಡೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಅವರು ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ.

ಕೆಲಸದ ಒತ್ತಡದಿಂದ ಮತ್ತು ಆಹಾರದಲ್ಲಿ ಏರುಪೇರಾದ ಪರಿಣಾಮ ಎಸ್‍ಪಿ ಡಿ.ದೇವರಾಜ್ ಅವರಿಗೆ ರಕ್ತದೊತ್ತಡ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 24 ಗಂಟೆಗಳ ಬಳಿಕ ಮತ್ತೆ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಚಂದ್ರಕಾಂತ್ ತಿಳಿಸಿದ್ದಾರೆ.

Facebook Comments

Sri Raghav

Admin