ಮನೆಗೆ ನುಗ್ಗಿ ಮಲಗಿದ್ದವನ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ..!

ಈ ಸುದ್ದಿಯನ್ನು ಶೇರ್ ಮಾಡಿ

Murder--01

ಹಾಸನ,ಡಿ.1- ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಚನ್ನಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಹಿರಿಬಳ್ತಿ ಗ್ರಾಮದ ನಿವಾಸಿ ಅನಂತೇಗೌಡ(55) ಕೊಲೆಯಾದ ವ್ಯಕ್ತಿ.   ಅನಂತೇಗೌಡ ಒಂಟಿಯಾಗಿ ವಾಸವಾಗಿದ್ದರು. ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದಾಗ ಮಧ್ಯರಾತ್ರಿ 12.30ರಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇಂದು ಬೆಳಗ್ಗೆ ವಿಷಯ ತಿಳಿದು ಸ್ಥಳಕ್ಕೆ ಪಿಎಸ್‍ಐ ತಿಮ್ಮಶೆಟ್ಟಿ , ಸಿಪಿಐ ಹರೀಶ್‍ಬಾಬು, ಎಎಸ್‍ಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಪಿಐ ಹರೀಶ್‍ಬಾಬು ಮಾತನಾಡಿ, ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲಾಗುವುದು. ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂಬ ವಿಷಯವೂ ತನಿಖೆಯಿಂದ ತಿಳಿಯಬೇಕಾಗಿದೆ. ಹಲವು ಆಯಾಮಗಳಲ್ಲಿ ತನಿಖೆ ಮುಂದುವರೆಸುವುದಾಗಿ ತಿಳಿಸಿದರು. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin