ಯೋಗೀಶ್‍ಗೌಡ ಕೊಲೆ ಪ್ರಕರಣದಲ್ಲಿ ವಿನಯ್‍ಕುಲಕರ್ಣಿ ಪಾತ್ರವಿಲ್ಲ, ಸಿಬಿಐಗೆ ವಹಿಸಲ್ಲ: ಸಿಎಂ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--02

ಹುಬ್ಬಳ್ಳಿ,ಡಿ.1-ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಅವರ ಪಾತ್ರವಿಲ್ಲ. ಅವರ ರಾಜಕೀಯ ಬೆಳವಣಿಗೆ ಸಹಿಸದ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜಕೀಯ ಪ್ರೇರಿತ ಆರೋಪವಾಗಿದೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನಮ್ಮ ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿದ್ದಾರೆ. ಅವರ ದಕ್ಷತೆ ಮೇಲೆ ನನಗೆ ವಿಶ್ವಾಸವಿದೆ ಎಂದು ಹೇಳಿದರು.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ಧ ಈಗಾಗಲೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ತನಿಖೆ ಮುಗಿದ ನಂತರ ನಿಜಾಂಶ ಏನೆಂಬುದು ಹೊರಬರುತ್ತದೆ ಎಂದು ಹೇಳಿದರು. 15 ದಿನದೊಳಗಾಗಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಶೀಘ್ರವೇ ಈ ಸಮಸ್ಯೆ ಬಗೆಹರಿದರೆ ಅದನ್ನು ನಾವು ಸ್ವಾಗತಿಸುವುದಾಗಿ ತಿಳಿಸಿದರು. ಸಿದ್ದರಾಮಯ್ಯ ಅವರಿಗೆ ರಾಜಕೀಯ ಜ್ಞಾನವಿಲ್ಲ. ಅವರು ಬಚ್ಚಾ ಎಂದು ಯಡಿಯೂರಪ್ಪ ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ ಜೈಲಿಗೆ ಹೋಗಿ ಬಂದವರಿಂದ ಪಾಠ ಕಲಿಯಬೇಕಾಗಿಲ್ಲ ಎಂದು ಟಾಂಗ್ ನೀಡಿದರು.

Facebook Comments

Sri Raghav

Admin