ಸಂವಿಧಾನಾತ್ಮಕವಾಗಿ ದತ್ತಪೀಠ ವಿವಾದ ಇತ್ಯರ್ಥಕ್ಕೆ ಬದ್ಧ : ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-CM--01

ಚಿಕ್ಕಮಗಳೂರು,ಡಿ.1- ದತ್ತ ಪೀಠದ ಸಮಸ್ಯೆಯನ್ನು ಸಂವಿಧಾನಬದ್ಧವಾಗಿ ಕಾನೂನು ರೀತಿಯಲ್ಲಿ ಪರಿಹರಿಸಲು ಬದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ದತ್ತಪೀಠದ ಸಮಸ್ಯೆ ಬಗೆಹರಿಸಲು ಕಾಲಮಿತಿ ನಿಗದಿ ಮಾಡಿಲ್ಲ. ಪ್ರಕರಣ ನ್ಯಾಯಾಲಯದಲ್ಲಿ ಇದ್ದಕಾರಣ ಸಮಸ್ಯೆ ಪರಿಹಾರಕ್ಕೆ ನ್ಯಾಯಾಲಯವು ಸರ್ಕಾರಕ್ಕೆ ಸೂಚನೆ ನೀಡಿದೆ. ಸುಪ್ರೀಂಕೋರ್ಟ್ ಸೂಚನೆಯಂತೆ ಸರ್ಕಾರ ಸಚಿವರನ್ನು ಹಾಗೂ ಮುಜರಾಯಿ ಇಲಾಖೆ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿ ಎರಡು ಕೋಮಿನ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಇವುಗಳ ಆಧಾರದ ಮೇಲೆ ಸಂವಿಧಾನಬದ್ಧವಾಗಿ ಕ್ರಮ ಕೈಗೊಳ್ಳಲು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಅಡಿಕೆ ಬೆಳೆಗಾರರು ಸಮಸ್ಯೆಗೆ ಸಿಲುಕಿದ್ದು ಅವರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಬೇಕು. ಈ ಬಾರಿ ರೈತರು ಮೆಕ್ಕೆಜೋಳವನ್ನು ಭಾರೀ ಪ್ರಮಾಣದಲ್ಲಿ ಬೆಳೆದಿದ್ದಾರೆ. ಇವರ ನೆರವಿಗೆ ಬರುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರೆ ಅವರು ಸ್ಪಂದಿಸುತ್ತಿಲ್ಲ. ಇದಕ್ಕೆ ರಾಜ್ಯ ಸರ್ಕಾರವೇ ಪಡಿತರ ವ್ಯವಸ್ಥೆ ಮೂಲಕ ಮಾರಾಟ ಮಾಡಲು ಸೂಚಿಸಿದೆ ಎಂದರು.

ವಿದ್ಯುತ್ ಖರೀದಿ ವಿಚಾರದಲ್ಲಿ ಶೋಭಾ ವಿರುದ್ಧ ಸೇಡುತೀರಿಸಿಕೊಳ್ಳಲು ಸರ್ಕಾರ ಮುಂದಾಗಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದ್ದು, ಕುಮಾರಸ್ವಾಮಿ ಸದನದಲ್ಲಿ ಈ ವಿಷಯ ಪ್ರಸ್ತಾಪ ಮಾಡಿದ್ದರು. ಎಲ್ಲಾ ಪಕ್ಷದ ಸದಸ್ಯರು ಇದ್ದರು. ವಿದ್ಯುತ್ ಖರೀದಿ ಪ್ರಕರಣದ ವರದಿ ಈಗ ಸದನಕ್ಕೆ ಮಂಡನೆ ಮಾಡಲಾಗಿದೆ ಎಂದರು.  ಕೇಂದ್ರ ಸರ್ಕಾರ ಗೋಹತ್ಯೆ ಕಾಯ್ದೆ ವಾಪಸ್ ಪಡೆಯಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅದಕ್ಕೂ ನಮಗೂ ಸಂಬಂಧವಿಲ್ಲ. ಗೋಹತ್ಯೆ ವಿಚಾರವಾಗಿ ಈಗಾಗಲೇ ಕಾಯ್ದೆ ರಚನೆಯಾಗಿ ಕಾಯ್ದೆ ಪ್ರಕಾರ ಮುಂದುವರೆಸಿಕೊಂಡು ಹೋಗುವುದಾಗಿ ಹೇಳಿದರು. ಫೆಬ್ರವರಿಯಲ್ಲಿ ಮುಂದಿನ ಬಜೆಟ್ ಮಂಡಿಸಲಿದ್ದೇನೆ. ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಕಾರ್ಯ ಮುಂದುವರೆಸುತ್ತೇನೆ ಎಂದ ಅವರು, 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸುವುದಾಗಿ ತಿಳಿಸಿದರು.

Facebook Comments

Sri Raghav

Admin