ಒಖಿ ಚಂಡಮಾರುತ ತತ್ತರಿಸಿರುವ ದಕ್ಷಿಣ ರಾಜ್ಯಗಳಿಗೆ ಅಗತ್ಯ ನೆರವು : ಮೋದಿ ಭರವಸೆ

ಈ ಸುದ್ದಿಯನ್ನು ಶೇರ್ ಮಾಡಿ

oki--02

ಚೆನ್ನೈ, ಡಿ.2-ಒಖಿ ಚಂಡಮಾರುತದಿಂದ ತತ್ತರಿಸಿರುವ ತಮಿಳುನಾಡಿನ ದಕ್ಷಿಣ ಭಾಗಗಳಿಗೆ ಅಗತ್ಯ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಕನ್ಯಾಕುಮಾರಿ ಮತ್ತು ತಿರುನಲ್ವೆಲಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಚಂಡಮಾರುತದ ರುದ್ರನರ್ತನದಿಂದ ಉಂಟಾಗಿರುವ ಹಾನಿಗಾಗಿ ಕೇಂದ್ರೀಯ ಹಣಕಾಸು ನೆರವು ನೀಡುವಂತೆ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಮೋದಿ ಅಗತ್ಯವಾದ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧ ಎಂದು ಆಶ್ವಾಸನೆ ನೀಡಿದ್ದಾರೆ.

ದೂರವಾಣಿ ಸಂಭಾಷಣೆ ವೇಳೆ ತಮಿಳುನಾಡಿನಲ್ಲಿ ಒಖಿ ಚಂಡಮಾರುತದಿಂದ ಉಂಟಾಗಿರುವ ವ್ಯಾಪಕ ಹಾನಿಗಳ ಬಗ್ಗೆ ಮುಖ್ಯಮಂತ್ರಿಯವರು ಪ್ರಧಾನಿಗೆ ಮನವಿ ಮಾಡಿದರು ಎಂದು ನಿನ್ನೆ ತಡರಾತ್ರಿ ಬಿಡುಗಡೆ ಮಾಡಿದ ಸರ್ಕಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

Facebook Comments

Sri Raghav

Admin