ಕೆಪಿಎಸ್​ಸಿಯಲ್ಲಿ 1604 ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇಮಕಾತಿ

KPSC

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಿ ವೃಂದದ ತಾಂತ್ರಿಕ ಮತ್ತು ತಾಂತ್ರಿಕೇತರ  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 1604
ಹುದ್ದೆಗಳ ವಿವರ
ತಾಂತ್ರಿಕ – 61 (ಹೈ-ಕ ; 10) ಹುದ್ದೆಗಳು
ತಾಂತ್ರಿಕೇತರ – 1543 (ಹೈ-ಕ ; 300) ಹುದ್ದೆಗಳು

ಶುಲ್ಕ : ಸಾಮಾನ್ಯ ವರ್ಗದವರಿಗೆ 600 ರೂ, ಪ್ರವರ್ಗ 2(ಎ), 2(ಬಿ), 3(ಎ) ಮತ್ತು 3(ಬಿ) ವರ್ಗದವರಿಗೆ 300 ರೂ.ಗಳು. ಹಾಗೂ ಪ.ಜಾ, ಪಪಂ, ಪ್ರವರ್ಗ 1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ ಶುಲ್ಕ ನಿಗದಿಗೊಳಿಸಲಾಗಿದೆ. ಶುಲ್ಕವನ್ನು ಸ್ಥಳೀಯ ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳ ಮೂಲಕ  ಪಾವತಿಸಲು ಮಾತ್ರ ಅವಕಾಶವಿದೆ.

ಅರ್ಹತೆ : ಒಂದಕ್ಕಿಂತ ಹೆಚ್ಚು ಜೀವಂತ ಪತ್ನಿ ಹೊಂದಿರುವ ಪುರುಷ, ಈಗಾಗಲೇ ಮತ್ತೊಬ್ಬ ಹೆಂಡತಿ ಇರುವ ಪುರುಷನನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿ ಇಲ್ಲದೇ ನೇಮಕಾತಿಗೆ ಅರ್ಹರಾಗಿರುವುದಿಲ್ಲ.
ವಿದ್ಯಾರ್ಹತೆ ; ಹುದ್ದೆಗೆ ಸಂಭಂದಿಸಿದ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ನಿಗದಿಯಾಗಿದ್ದು, ಗರಿಷ್ಠ ವಯೋಮಿತಿಯಲ್ಲಿ ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ,2ಬಿ,3ಎ,3ಬಿ ವರ್ಗದವರಿಗೆ 38 ವರ್ಷ ಹಾಗೂ ಪ.ಜಾ, ಪಪಂ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಮಾಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 28-12-2017
ಶುಲ್ಕ ಪಾವತಿಸಲು ಕೊನೆಯ ದಿನಾಂಕ  : 29-12-2017

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.kpsc.kar.nic.in   ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

Facebook Comments