ನಾಳೆ ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬೆಂಗಳೂರು, ಡಿ.2- ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಡಿ.4ರಂದು ರಾಹುಲ್‍ಗಾಂಧಿಯವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಉಪಸ್ಥಿತರಿರುವ ಸಂಬಂಧ ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಗೆ ತೆರಳಲಿದ್ದಾರೆ. ರಾಹುಲ್‍ಗಾಂಧಿಯವರು ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂಧರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಜರಿರಬೇಕಾದ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಲಿದ್ದು, ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ನಗರಕ್ಕೆ ಹಿಂದಿರುಗಲಿದ್ದಾರೆ. ರಾಹುಲ್ ನಾಮಪತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಿಂದ ಸೂಚಕರಾಗಿ 60 ಜನ ಸಹಿ ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಹಿ ಮಾಡಲಿದ್ದಾರೆ. ಕಾಂಗ್ರೆಸ್ ಶಾಸಕರು, ಸಚಿವರು ಸೂಚಕರಾಗಿ ಸಹಿ ಹಾಕಲಿದ್ದು, ಇವರ ಸಹಿ ಪಡೆಯಲು ಎಐಸಿಸಿ ಚುನಾವಣಾ ಸಮಿತಿ ಮುಖ್ಯಸ್ಥ ಪಲ್ಲಂರಾಜು ಇಂದು ನಗರಕ್ಕೆ ಆಗಮಿಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಮುಖಂಡರನ್ನು ಭೇಟಿ ಮಾಡಿ ಸಹಿ ಪಡೆಯಲಿದ್ದಾರೆ.

Facebook Comments

Sri Raghav

Admin