ಗೋಹತ್ಯೆ ನಿಷೇಧ ಆದೇಶ ವಾಪಸ್ಸಾತಿಗೆ ಕೇಂದ್ರ ನಿರ್ಧಾರ..!

ಈ ಸುದ್ದಿಯನ್ನು ಶೇರ್ ಮಾಡಿ

Cow-c-01

ನವದೆಹಲಿ, ಡಿ.3-ಕಸಾಯಿಖಾನೆಗಳಿಗೆ ಜಾನುವಾರುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಿ ಹೊರಡಿಸಲಾಗಿದ್ದ ವಿವಾದಾತ್ಮಕ ಆದೇಶವನ್ನು ಹಿಂಪಡೆಯಲು ಕೇಂದ್ರ ಪರಿಸರ ಸಚಿವಾಲಯ ಚಿಂತನೆ ನಡೆಸಿದೆ.  ಕಸಾಯಿಖಾನೆಗಳಿಗೆ ಕೋಣಗಳು ಸೇರಿದಂತೆ ಜಾನುವಾರುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಿ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಹಲವು ನ್ಯೂನತೆಗಳಿದ್ದು, ಪರಿಷ್ಕøತ ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರಕಾರದ ಆದೇಶ ಜಾರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಈ ಅಧಿಸೂಚನೆ ಹಿಂಪಡೆಯಲು ಮುಂದಾಗಿದೆ ಎಂದು ಹೇಳಲಾಗಿದೆ.

Facebook Comments

Sri Raghav

Admin