ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್’ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Tractor--01

ವಿಜಯಪುರ, ಡಿ.3-ರಸ್ತೆಬದಿ ನಿಂತಿದ್ದ ಕಬ್ಬು ಸಾಗಾಟ ಮಾಡುವ ಟ್ರ್ಯಾಕ್ಟರ್ ಬೈಕ್ ಡಿಕ್ಕಿ ಹೊಡೆದಿದ್ದು , ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಮಿಟ್ಟು ಸಿಂಗ್ ಪರಿವಾರ(33) ಮೃತಪಟ್ಟ ಸವಾರ. ಇಂದು ಬೆಳಗ್ಗೆ ಇಂಡಿ ತಾಲ್ಲೂಕಿನ ಅದನಾಳ ಗ್ರಾಮದ ಎನ್.ಎಚ್ 13ರ ಬಳಿ ರಸ್ತೆಬದಿಯಲ್ಲಿ ಕಬ್ಬು ಸಾಗಾಟ ಮಾಡುವ ಟ್ರ್ಯಾಕ್ಟರ್ ನಿಂತಿದೆ. ಅತಿವೇಗವಾಗಿ ಬಂದ ಬೈಕ್ ಹಿಂಬದಿಯಿಂದ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin