ಕಾಂಗ್ರೆಸ್‍ಗೆ ಶಾಕ್ ನೀಡಿದ ಮೇಘಾಲಯ ನಾಯಕ ಲಪಾಂಗ್

ಈ ಸುದ್ದಿಯನ್ನು ಶೇರ್ ಮಾಡಿ

DD-Lapang--03

ಶಿಲ್ಲಾಂಗ್, ಡಿ.4- ಈಶಾನ್ಯ ಭಾರತದ ಸಪ್ತ ಸಹೋದರಿ ರಾಜ್ಯಗಳಲ್ಲೂ ಬಿಜೆಪಿ ಪ್ರಭಾವ ಹೆಚ್ಚುತ್ತಿರುವ ಸಂದರ್ಭದಲ್ಲೇ ಮೇಘಾಲಯದಲ್ಲಿ ಕಾಂಗ್ರೆಸ್‍ಗೆ ಮತ್ತೊಂದು ಹಿನ್ನಡೆಯಾಗಿದೆ. ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಾಗೂ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಡಿ.ಡಿ.ಲಪಾಂಗ್ ಮುಂದಿನ ವರ್ಷಾರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಇದರಿಂದ ಆ ರಾಜ್ಯದ ಪ್ರಭಾವಿ ಧುರೀಣರೊಬ್ಬರು ಸ್ಫರ್ಧಾ ಕಣದಿಂದ ಹಿಂದಕ್ಕೆ ಸರಿದಿರುವುದು ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕುವಂತಾಗಿದೆ.

85 ವರ್ಷದ ಲಪಾಂಗ್ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ನಿರ್ಧಾರವನ್ನು ತಿಳಿಸಿದರು. ಕಳೆದ ತಿಂಗಳು ಇದೇ ರಾಜ್ಯದ ಉಪ ಮುಖ್ಯಮಂತ್ರಿ ರಾಯ್‍ಟ್ರೆ ಸಿ ಲಾಲೂ ಮತ್ತು ಹಿರಿಯ ಮುಖಂಡ ರೋಷನ್ ವರ್‍ರ್ಜಿ ಅವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

Facebook Comments

Sri Raghav

Admin