ಗದಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪೀವನ್ ಹುದ್ದೆಗಳ ನೇಮಕಾತಿ

gadaga

ಗದಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪೀವನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 24

ವಿದ್ಯಾರ್ಹತೆ7ನೇ ತರಗತಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ವಯಸ್ಸು, ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ – 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ನಿಗದಿಮಾಡಲಾಗಿದ್ದು, ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 50 ರೂಪಾಯಿಗಳ ಶುಲ್ಕವನ್ನು ನಿಗದಿ ಮಾಡಲಾಗಿದೆ. ಶುಲ್ಕವನ್ನು ಎಸ್.ಬಿ.ಐನ ನೆಟ್ ಬ್ಯಾಂಕಿಂಗ್ ಅಥವಾ ಬ್ಯಾಂಕಿನ ಯಾವುದೆ ಶಾಖೆಯಲ್ಲಿ ಚಲನ್ ಮುಖಾಂತರ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 23-12-2017

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://ecourts.gov.in/gadag ಗೆ ಭೇಟಿ ನೀಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments